ಸಾಹಿತಿ ಗಿರೀಶ ಕಾರ್ನಾಡರು ತಮ್ಮ ‘ಆಡಾಡತ ಆಯುಷ್ಯ’ ಆತ್ಮ– ಕತೆಗಳನ್ನು ವೈದ್ಯೆ ಡಾ.ಮಧುಮಾಲತಿ ಗುಣೆ ಅವರಿಗೆ ಅರ್ಪಿಸಿದ್ದಾರೆ. ಅದರ ಹಿಂದೆ ಕುತೂಹಲದ ಕಥೆಯೊಂದಿದೆ. ಪುಸ್ತಕದ ಅರ್ಪಣೆಯ ಭಾಗ ಇಲ್ಲಿದೆ.

ಧಾರವಾಡ, 1973

ಆಯಿ (ನನ್ನ ತಾಯಿ), ಬಾಪ್ಪಾ (ತಂದೆ) ಹಾಗೂ ನಾನು ಊಟ ಮಾಡುತ್ತಿದ್ದೆವು. ನನ್ನ ಚಿತ್ರ ‘ವಂಶವೃಕ್ಷ’ ಆಗಲೇ ತುಂಬ ಯಶಸ್ವಿಯಾಗಿ ಓಡಿ ಹಲವಾರು ಬಹುಮಾನಗಳನ್ನು ಗಳಿಸಿತ್ತು. ‘ಕಾಡು’ ಚಿತ್ರ ಮುಗಿಯುತ್ತಾ ಬಂದಿತ್ತು. ನಾನು ಪುಣೆಯ ಫಿಲ್ಮ್ ಹಾಗೂ ಟೆಲಿವಿಜನ್ ಸಂಸ್ಥಾನಕ್ಕೆ ನಿರ್ದೇಶಕನಾಗಿ ನೇಮಕಗೊಂಡಿದ್ದೆ. ಒಟ್ಟು ವಾತಾವರಣ ಆತ್ಮಭಿನಂದನೆಯಿಂದ ಬೀಗುತ್ತಿತ್ತು.

ಒಮ್ಮೆಲೆ ಆಯಿ ಬಾಪ್ಪಾನತ್ತ ನೋಡಿ, ‘ಮತ್ತು ನಾವು ಇವನು ಬೇಡ ಅಂತ ಅಂದುಕೊಂಡಿದ್ದೆವು!’ ಎಂದಳು.

ಈ ವಿಧಾನ ಅನಪೇಕ್ಷಿತವಾಗಿ ಬಂದರೂ ಬಾಪ್ಪಾಗೆ ತಕ್ಷಣ ಅದರ ಮೊನೆ ಚುಚ್ಚಿತು. ಮುಖ ಕೆಂಪೇರಿ, ‘ಅಂ... ಹೂಂ... ಅದೆಲ್ಲ ನಿನ್ನ idea- ನನ್ನದಲ್ಲ. ಈಗ ಯಾಕೆ ಅದೆಲ್ಲ?’ ಎಂದು ಊಟದ ತಟ್ಟೆಯಲ್ಲಿ ಮುಖ ಮರೆಮಾಡಿದ.

ನನ್ನ ಕುತೂಹಲ ಕೆರಳಿತು. ಕೆದಕಿ ಕೇಳಿದೆ. ಆಗ ಆಯಿ ಹೇಳಿದಳು.

‘ನೀನು ಹೊಟ್ಟೆಯಲ್ಲಿದ್ದಾಗ, ನನಗೆ ಇನ್ನು ಮಕ್ಕಳು ಸಾಕು ಅನಿಸಿತು. ಮೂರು ಮಕ್ಕಳಿದ್ದಾರಲ್ಲ. ಇನ್ನೂ ಯಾಕೆ? ಎಂದೆ. ಅದಕ್ಕಾಗಿ ಪುಣೆಯಲ್ಲಿಯ ಡಾ.ಮಧುಮಾಲತಿ ಗುಣೆ ಎಂಬ ಡಾಕ್ಟರ ಕ್ಲಿನಿಕ್ಕಿಗೆ ಹೋದೆವು’

‘ಮುಂದೆ?’

‘ಆಕೆ ಬರತೇನೆ ಎಂದವಳು ಬರಲೇ ಇಲ್ಲ. ಸುಮಾರು ಒಂದು ತಾಸು ಹಾದಿ ಕಾಯ್ದು ಬೇಸತ್ತು ಬಂದು ಬಿಟ್ಟೆವು’

‘ಆಮೇಲೆ?’

‘ಆಮೇಲೇನು? ಹೊರಳಿ ಆ ಕಡೆಗೆ ಹೋಗಲೇ ಇಲ್ಲ’

ನಾನು ಗರ ಬಡಿದವನಂತಾದೆ. ನನಗಾಗ ಮೂವತ್ತೈದು. ಆದರೂ, ನಾನಿಲ್ಲದೆ ಈ ಜಗತ್ತು ಇರಬಹುದಾಗಿತ್ತೆಂಬ ಯೋಚನೆಗೆ ನಾನು ಮಂಕಾಗಿ ಕೂತೆ. ನಾನಿಲ್ಲದ್ದು ಹೇಗಿರತಿತ್ತು? ಕೆಲಹೊತ್ತು ಎಲ್ಲಿ ಇದ್ದೇನೆ ಎಂಬುದೆ ಎಚ್ಚರವಿಲ್ಲದೆ ಈ ಇರವಳಿಯನ್ನೇ ದಿಟ್ಟಿಸುತ್ತ ಕೂತೆ. ಮರುಗಳಿಗೆಗೆ ಇನ್ನೊಂದು ವಿಚಾರ ಹೊಳೆದು ದಿಗ್ಭ್ರಾಂತನಾಗಿ ಕೇಳಿದೆ.

‘ಹಾಗಾದರೆ ತಂಗಿ– ಲೀಲಾ– ಆಕೆಯನ್ನು ಹೇಗೆ–?’

ಆಯಿ ಅರೆನಾಚುತ್ತಾ, ‘ಅಯ್ಯೋ ಆ ವರೆಗೆ ನಾವು ಆ ಯೋಚನೆಯನ್ನೇ ಬಿಟ್ಟುಬಿಟ್ಟಿದ್ದೆವು’ ಎಂದು ಖೊಳ್ಳನೆ ನಕ್ಕಳು.

ಬಾಪ್ಪಾ ತಾಟಿನೊಳಗಿಂದ ದೃಷ್ಟಿಯನ್ನೇ ಎತ್ತಿರಲಿಲ್ಲ.

ಅಂದು ಆ ಡಾಕ್ಟರರು ಕೊಟ್ಟ ಮಾತಿಗೆ ಸರಿಯಾಗಿ ಕ್ಲಿನಿಕ್ಕಿಗೆ ಬಂದಿದ್ದರೆ ಈ ಆತ್ಮ– ಕತೆಗಳು ಮಾತ್ರವಲ್ಲ ಇದರ ಉತ್ತರ ಪುರುಷನಾದ ನಾನೇ ಇಲ್ಲಿರುತ್ತಿರಲಿಲ್ಲ. ಆದ್ದರಿಂದ ಇವೆಲ್ಲವುಗಳ ಅಸ್ತಿತ್ವಕ್ಕೆ ಕಾರಣೀಭೂತಳಾದ ಆ ಡಾ.ಮಧುಮಾಲತಿ ಗುಣೆಯ ನೆನಪಿಗೆ ಈ ಆತ್ಮ– ಕತೆಗಳನ್ನು ಅರ್ಪಿಸುತ್ತಿದ್ದೇನೆ.

–ಗಿರೀಶ ಕಾರ್ನಾಡ

ಇವುಗಳನ್ನೂ ಓದಿ:

*ಆ ವೈದ್ಯೆ ಅಂದು ಕ್ಲಿನಿಕ್ಕಿಗೆ ಬಂದಿದ್ದರೆ ಕಾರ್ನಾಡರೇ ಇರುತ್ತಿರಲಿಲ್ಲ!

* ತಿಟ್ಹತ್ತಿ ತಿರುಗಿದಾಗ ಕಂಡ ಜಪಾನ್| ಗಿರೀಶ ಕಾರ್ನಾಡರ ಬರಹ

*ಧಾರ್ಮಿಕ ವಿಧಿ ವಿಧಾನಗಳಿಲ್ಲದೇ ಅಂತಿಮ ‘ಸಂಸ್ಕಾರ’

*ಕನ್ನಡದ ಸಂಸ್ಕೃತಿಯ ಕಂಪನ್ನು ಜಗತ್ತಿಗೆ ಪಸರಿಸಿದವರು ಕಾರ್ನಾಡ: ಸಿಎಂ ಎಚ್ಡಿಕೆ

* ಆಡಾಡತ ಆಯುಷ್ಯ | ‘ಸಂಸ್ಕಾರ’ಕ್ಕೊಂದು ಅಗ್ರಹಾರ ಸಿಕ್ಕ ಕಥೆ

* ಆಡಾಡತ ಆಯುಷ್ಯ | ‘ಗೋಕರ್ಣ’ ಎಂಬ ಅಡ್ಡ ಹೆಸರನ್ನು ಬಿಟ್ಟು, ‘ಕಾರ್ನಾಡ’ ಆದ ಪ್ರಸಂಗ

* ಆಡಾಡತ ಆಯುಷ್ಯ | ‘ಸಂಸ್ಕಾರ’ ಚಿತ್ರೀಕರಣದ ಮುಗಿಸಿ ಹೊರಟ ದಿನದ ನೆನಪು

*ರಘುನಾಥ ಚ.ಹ. ಬರಹ | ನಮ್ಮ ತಲೆಮಾರಿಗೆ ಚಾಳೇಶದಾನ ಮಾಡಿದವರಾರು?

*ರಾಮಚಂದ್ರ ಗುಹಾ ಬರಹ | ಮೆಚ್ಚುಗೆಗೆ ಮಾತ್ರ ಪಾತ್ರ ಈ ಗಿರೀಶ ಕಾರ್ನಾಡ

* ಅಭಿವ್ಯಕ್ತಿ ಸ್ವಾತಂತ್ರ್ಯ ಸಮಾವೇಶ | ‘ನಗರ ನಕ್ಸಲ’ ಘೋಷಿಸಿಕೊಂಡ ಕಾರ್ನಾಡ್

* ಕಾರ್ನಾಡರ ಬದುಕು, ವೃತ್ತಿ, ಪ್ರವೃತ್ತಿಯ ಕುರಿತ ಚಿತ್ರಗಳು

* ಕಾರ್ನಾಡ್ ನಿಧನ ಹಿನ್ನೆಲೆ: ಇಂದು ಸರ್ಕಾರಿ ರಜೆ ಘೋಷಣೆ, ಮೂರು ದಿನ ಶೋಕಾಚರಣೆ

*ಶಿರಸಿಯೊಂದಿಗೆ ಗಿರೀಶ ಕಾರ್ನಾಡರ ನಂಟು ನೆನೆದ ಬಾಲ್ಯದ ಗೆಳೆಯರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.