ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ.

ಇದೀಗ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ.ಆರ್.ಜಿ. ಸ್ಟುಡಿಯೊ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

ಸುದೀಪ್ ಅವರು ನಾಳೆ (ಸೆಪ್ಟೆಂಬರ್ 02) ತಮ್ಮ 50ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ 'God Forgives, I don't - King Kichcha' ಎಂಬ ಅಡಿಬರಹವಿದ್ದು, ಇದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ.

’ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದೆ ಎಂದು ನಿರ್ಮಾಪಕ ಕಾರ್ತಿಕ್ ಗೌಡ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.