ಸೆನ್ಸೇಷನಲ್ ಸ್ಟಾರ್ ಕೋಮಲ್ ‘ಯಲಾಕುನ್ನಿ’ ಎನ್ನುತ್ತಾ ‘ವಜ್ರಮುನಿ’ಯಾಗಿ ತೆರೆಗೆ ಬರಲು ಸಜ್ಜಾಗುತ್ತಿದ್ದಾರೆ. ಸೌಭಾಗ್ಯ ಸಿನಿಮಾಸ್ ಲಾಂಛನದಲ್ಲಿ ಮಹೇಶ್ ಗೌಡ ಅವರು ನಿರ್ಮಿಸುತ್ತಿರುವ ಹಾಗೂ ಎನ್.ಆರ್. ಪ್ರದೀಪ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುತ್ತಿರುವ ‘ಯಲಾಕುನ್ನಿ’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ.

ನಟ ಕೋಮಲ್ ಕುಮಾರ್ ಅವರ ಜನ್ಮದಿನದಂದೇ ಈ ಲುಕ್ ಬಿಡುಗಡೆಯಾಗಿದ್ದು, ಕೋಮಲ್ ಅವರು ನಟ ದಿವಂಗತ ವಜ್ರಮುನಿ ಅವರ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ‘ಯಲಾಕುನ್ನಿ’ ಚಿತ್ರದಲ್ಲಿ ಕೋಮಲ್ ಅವರು ಬಹುಭಾಗ ‘ವಜ್ರಮುನಿ’ ಅವರ ಗೆಟಪ್ನಲ್ಲೇ ಕಾಣಿಸಿಕೊಳ್ಳಲಿದ್ದಾರೆ.

‘ಮೇರಾ ನಾಮ್ ವಜ್ರಮುನಿ’ ಎಂಬ ಅಡಿಬರಹ ಹಾಗೂ ‘ನರಕ ತುಂಬಿ ಮರಳಿ ಬಂದ ರಾಮನ ಗುಣದ ರಾವಣ’ ಎಂಬ ಬರಹ ಪೋಸ್ಟರ್ನಲ್ಲಿದ್ದು, ಇದು ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿದೆ. ನವರಸ ನಾಯಕ ಜಗ್ಗೇಶ್ ಅವರ ಮಗ ಯತಿರಾಜ್ ಮತ್ತು ವಜ್ರಮುನಿ ಅವರ ಮೊಮ್ಮಗ ಆಕರ್ಶ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.