ತೀವ್ರ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ಬಾಲಿವುಡ್ ನಟಿ ಸಾಯಿರಾ ಬಾನು(76) ಅವರನ್ನು ತುರ್ತು ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.

ಸಾಯಿರಾ ಬಾನು ಅವರು ಮೂರು ದಿನಗಳ ಹಿಂದೆ ಮುಂಬೈನ ಹಿಂದುಜಾ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ರಕ್ತದೊತ್ತಡ ಕಾಣಿಸಿಕೊಂಡ ಪರಿಣಾಮ ಅವರನ್ನು ತುರ್ತು ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.

ಸಾಯಿರಾ ಬಾನು ಇತ್ತೀಚೆಗೆ ತಮ್ಮ ಪತಿ, ಬಾಲಿವುಡ್ನ ಖ್ಯಾತ ನಟ ದಿಲೀಪ್ ಕುಮಾರ್ ಅವರನ್ನು ಕಳೆದುಕೊಂಡಿದ್ದಾರೆ. ದಿಲೀಪ್ ಕುಮಾರ್ ಜತೆ ಸುಮಾರು 55 ವರ್ಷಗಳ ದಾಂಪತ್ಯವನ್ನು ಸಾಯಿರಾ ನಡೆಸಿದ್ದರು.

ಸಾಯಿರಾ 1960ರಲ್ಲಿ 16 ವರ್ಷದವರಿದ್ದಾಗಲೇ ಹಿಂದಿ ಚಲನಚಿತ್ರಗಳಲ್ಲಿ ನಟಿಸಲು ತೊಡಗಿದರು. ನಸೀಮ್ ಬಾನು ಪುತ್ರಿಯಾಗಿದ್ದ ಸಾಯಿರಾ, ಹಲವು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.