ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (92) ಅವರು ಇಂದು ನಿಧನರಾದರು. ಕೋವಿಡ್–19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಕೆಲವು ವಾರಗಳಿಂದ ಅವರು ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು.

ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅವರು ಅಗಲಿದ್ದಾರೆ.

ಗಾನ ಕೋಗಿಲೆ ಲತಾ ದೀದಿ

ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರು ಸುಮಾರು ಏಳು ದಶಕಗಳ ಕಾಲ ಹಿನ್ನೆಲೆ ಗಾಯಕಿಯಾಗಿ ಮನರಂಜಿಸಿದ್ದಾರೆ. 1942ರಿಂದ ಆರಂಭವಾದ ಅವರ ಗಾಯನ ಯಾನದಲ್ಲಿ 30,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಏ ಮೇರೆ ವತನ್ ಕೆ ಲೋಗೊ, ಲಗ್ ಜಾ ಗಲೇ, ಏಹ್ ಕಹಾ ಆಗಯೇ ಹಮ್ ಹಾಗೂ ಪ್ಯಾರ್ ಕಿಯಾ ತೊ ಡರ್ನಾ ಕ್ಯಾ,...ಸೇರಿದಂತೆ ಅವರ ನೂರಾರು ಹಾಡುಗಳು ಇವತ್ತಿಗೂ ಅಪಾರ ಜನಪ್ರಿಯತೆಯನ್ನು ಪಡೆದಿವೆ.

ಲತಾ ಮಂಗೇಶ್ಕರ್ ಅವರಿಗೆ ಭಾರತ ರತ್ನ, ಪದ್ಮ ವಿಭೂಷಣ, ಪದ್ಮ ಭೂಷಣ, ದಾದಾ ಸಾಹೇಬ್ ಫಾಲ್ಕೆ ಸೇರಿದಂತೆ ಹತ್ತು ಹಲವು ಪ್ರಶಸ್ತಿ, ಪುರಸ್ಕಾರಗಳು ಸಂದಿವೆ.

ಪಂಡಿತ್ ದೀನಾನಾಥ್ ಮಂಗೇಶ್ಕರ್ ಅವರ ಹಿರಿಯ ಮಗಳಾಗಿ 1929ರ ಅಕ್ಟೋಬರ್ 28ರಂದು ಲತಾ ಜನಿಸಿದರು. ಅವರ ತಂದೆ ಮರಾಠಿ ಮೂಲದ ಗಾಯಕರು. ಸೋದರಿ ಆಶಾ ಭೋಸ್ಲೆ ಸೇರಿದಂತೆ ಅವರಿಗೆ ನಾಲ್ವರು ಒಡಹುಟ್ಟಿದವರಿದ್ದಾರೆ.

Koo App
Veteran singer #BharatRatna #LataMangeshkar passes away at 92, after 28 days in hospital.
View attached media content
- IANS (@IANS) 6 Feb 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.