ಬೆಂಗಳೂರು: 'ಮನದ ಕಡಲು' ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಒಬ್ಬರು ಗುರುವಾರ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆಯ ನಿವಾಸಿ ಶಿವರಾಜ್ (30) ಮೃತಪಟ್ಟವರು.

ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ.

ಶಿವರಾಜ್ ಹಾಗೂ ಅವರ ಸಹೋದರ ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ನೆಲೆಸಿದ್ದರು. ಇಬ್ಬರೂ ಲೈಟ್ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು.

ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪ ಅಡಿ ನಿರ್ದೇಶಕ ಯೋಗರಾಜ್ ಭಟ್ (ಮೂರನೇ ಆರೋಪಿ) ಹಾಗೂ ವ್ಯವಸ್ಥಾಪಕ ಸುರೇಶ್ (ಮೊದಲ ಆರೋಪಿ) ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.ರೇಣುಕಸ್ವಾಮಿ ಕೊಲೆ | ದರ್ಶನ್, ಪವಿತ್ರಾಗೌಡ ಸಹಚರರ ಕ್ರೌರ್ಯ ಅನಾವರಣ: ಫೋಟೊ ಲಭ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.