ಮೆಜೆಸ್ಟಿಕ್ನಲ್ಲಿನ ಅಕ್ರಮ ಚಟುವಟಿಕೆಗಳು, ರೌಡಿಸಂ ಕುರಿತಾದ ಕಥೆ ಹೇಳುವ ‘ಮೆಜೆಸ್ಟಿಕ್-2’ ಡಿಸೆಂಬರ್ನಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗಷ್ಟೇ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಗೊಂಡಿದೆ. ದರ್ಶನ್ ಅಭಿನಯದ ‘ಮೆಜೆಸ್ಟಿಕ್’ ಚಿತ್ರಕ್ಕೆ ಕಥೆ ಬರೆದಿದ್ದ ರಾಮು ನಿರ್ದೇಶಿಸಿರುವ ಈ ಚಿತ್ರವನ್ನು ಹೆಚ್.ಆನಂದಪ್ಪ ನಿರ್ಮಿಸಿದ್ದಾರೆ.

‘ಮಾರ್ಚ್ 31ಕ್ಕೆ ನಮ್ಮ ಚಿತ್ರದ ಶೂಟಿಂಗ್ ಆರಂಭಿಸಿ, ಬೆಂಗಳೂರು ಸುತ್ತಮುತ್ತ ನಿರಂತರವಾಗಿ 126 ದಿನಗಳ ಕಾಲ ಶೂಟಿಂಗ್ ಮಾಡಿದ್ದೇವೆ. ಚಿತ್ರದುರ್ಗದ ಮುರುಘಾಮಠದಲ್ಲಿ ಡ್ಯುಯೆಟ್ ಸಾಂಗ್ ಚಿತ್ರೀಕರಣ ನಡೆಸಲಾಗಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಾರಂಭಗೊಂಡಿದ್ದು ಡಿಸೆಂಬರ್ 26ಕ್ಕೆ ಚಿತ್ರ ಬಿಡುಗಡೆ ಆಲೋಚನೆಯಿದೆ’ ಎಂದು ಮಾಹಿತಿ ನೀಡಿದರು ನಿರ್ದೇಶಕ ರಾಮು.

ಯುವನಟ ಭರತ್ಗೆ ಸಂಹಿತಾ ವಿನ್ಯಾ ಜೋಡಿಯಾಗಿದ್ದಾರೆ. ಮಾಲಾಶ್ರೀ ಒಂದು ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರುತಿ ನಾಯಕನ ತಾಯಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವಿನು ಮನಸು ಸಂಗೀತ, ವೀನಸ್ ಮೂರ್ತಿ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.