ಮುಂಬೈ: ₹2 ಕೋಟಿ ಹಣ ನೀಡದಿದ್ದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್, ಎನ್ಸಿಪಿ ನಾಯಕ ಜೀಶನ್ ಸಿದ್ದೀಕಿಯನ್ನು ಕೊಲ್ಲುವುದಾಗಿ ಬೆದರಿಸಿ ಮುಂಬೈ ಸಂಚಾರಿ ಪೊಲೀಸರಿಗೆ ಸಂದೇಶ ಕಳುಹಿಸಿದ್ದ 56 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತನನ್ನು ಅಜಾಂ ಮೊಹಮ್ಮದ್ ಮುಸ್ತಫಾ ಎಂದು ಗುರುತಿಸಲಾಗಿದ್ದು, ಈತ ಮಂಗಳವಾರ ಮುಂಬೈ ಸಂಚಾರಿ ಪೊಲೀಸರ ವಾಟ್ಸ್ಆ್ಯಪ್ ಹೆಲ್ಪ್ಲೈನ್ ಸಂಖ್ಯೆಗೆ ಸಂದೇಶ ಕಳುಹಿಸಿದ್ದ. ಹಣ ನೀಡದಿದ್ದರೆ ಮಾಜಿ ಸಚಿವ ಬಾಬಾ ಸಿದ್ದೀಕಿಗೆ ಆದ ಗತಿಯೇ ಈ ಇಬ್ಬರಿಗೂ ಆಗಲಿದೆ. ನನ್ನ ಸಂದೇಶವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಬೆದರಿಕೆ ಹಾಕಿದ್ದ.

ಅಕ್ಟೋಬರ್ 12ರಂದು ಬಾಂದ್ರಾದಲ್ಲಿ ಮೂವರು ಶೂಟರ್ಗಳು ಗುಂಡಿನ ದಾಳಿ ನಡೆಸಿ ಬಾಬಾ ಸಿದ್ದೀಕಿಯನ್ನು ಹತ್ಯೆ ಮಾಡಿದ್ದರು.

ಬೆದರಿಕೆ ಸಂದೇಶ ಕಳುಹಿಸಿದ್ದ ಮೊಬೈಲ್ ಸಂಖ್ಯೆಯ ಕಾಲ್ ರೆಕಾರ್ಡ್ ದಾಖಲೆಗಳನ್ನು ಸಂಗ್ರಹಿಸಿರುವ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮುಂಬೈ ಸಂಚಾರಿ ಪೊಲೀಸರ ವಾಟ್ಸ್ಆ್ಯಪ್ ಸಂಖ್ಯೆಗೆ ಬಂದಿದ್ದ ಬೆದರಿಕೆ ಸಂದೇಶದಲ್ಲಿ ಸಲ್ಮಾನ್ ಖಾನ್ ಬಳಿ ₹5 ಕೋಟಿಗೆ ಬೇಡಿಕೆ ಇಡಲಾಗಿತ್ತು. ಈ ಸಂಬಂಧ ಜಾರ್ಖಂಡ್ನ ಜೆಮ್ಶೆಡ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದರು.

ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿಯಿಂದ ಸಲ್ಮಾನ್ ಖಾನ್ಗೆ ಜೀವ ಬೆದರಿಕೆ ಇದ್ದು, ಅವರ ಮನೆ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಮನೆಯ ಸುತ್ತ ಚಲನವಲನದ ಮೇಲೆ ನಿಗಾ ಇಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.