ನಟ ವಿಜಯ ರಾಘವೇಂದ್ರ ಹಾಗೂ ಸೋನು ಗೌಡ ನಟನೆಯ ‘ಮರೀಚಿ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ಸಸ್ಪೆನ್ಸ್ ಥ್ರಿಲ್ಲಿರ್ ಕಥಾಹಂದರದ ಈ ಸಿನಿಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ವಿಜಯ ರಾಘವೇಂದ್ರ ಕಾಣಿಸಿಕೊಂಡಿದ್ದಾರೆ. ‘ಹ್ಯಾಪಿ ನ್ಯೂ ಇಯರ್’ ಸಿನಿಮಾ ಬಳಿಕ ಸೋನು ಗೌಡ ಮತ್ತೊಮ್ಮೆ ವಿಜಯ ರಾಘವೇಂದ್ರ ಅವರಿಗೆ ಜೋಡಿಯಾಗಿದ್ದಾರೆ. ಸಿದ್ಧ್ರುವ್(ಸಿದ್ದು) ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಸಂತೋಷ್ ಮಾಯಪ್ಪ ಅವರ ಜೊತೆಗೂಡಿ ನಿರ್ಮಾಣ ಮಾಡಿದ್ದಾರೆ. ಸಿದ್ಧ್ರುವ್‌ಗೆ ಇದು ಚೊಚ್ಚಲ ಸಿನಿಮಾ. ‘ಋಷಿಯೊಬ್ಬರ ಹೆಸರು ಶೀರ್ಷಿಕೆಯಾಗಿ ಆಯ್ಕೆ ಮಾಡಬೇಕಿತ್ತು. ಅದಕ್ಕೆ ‘ಮರೀಚಿ’ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ’ ಎನ್ನುತ್ತಾರೆ ಸಿದ್ಧ್ರುವ್.

‘ಚಿತ್ರದ ಟ್ಯಾಗ್‌ಲೈನ್ ‘God father of good and bad’ ಎಂದಿದೆ. ಇದುವೇ ಕಥೆಯ ಸಾರಾಂಶ. ‘ಮರೀಚಿ’ ಒಂದು ಕ್ರೈಮ್ ಥ್ರಿಲ್ಲರ್ ಸಿನಿಮಾ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ನನ್ನದು. ನಿರ್ದೇಶಕರು, ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ’ ಎಂದರು ವಿಜಯ ರಾಘವೇಂದ್ರ. ಅಭಿ ದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.