ನಟಿ ಮೇಘನಾರಾಜ್ ಅವರಿಗೆ ಪ್ರತಿಷ್ಠಿತ ‘ಫಾಗ್ ಹೀರೋ’ (FOG HERO) ಪ್ರಶಸ್ತಿ ಲಭಿಸಿದೆ.

ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ‘ಫೆಡರೇಷನ್ ಆಫ್ ಇಂಡೋ ಅಮೆರಿಕನ್ಸ್ ಆಫ್ ನಾದರ್ನ್ ಕ್ಯಾಲಿಫೋರ್ನಿಯಾ’ ಇವರು ಆಯೋಜಿಸುವ ‘ಫೆಸ್ಟಿವಲ್ ಆಫ್ ಗ್ಲೋಬ್’(FOG)ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಈ ಸಮಾರಂಭ ಕಳೆದ 40 ವರ್ಷಗಳಿಂದ ಅದ್ದೂರಿಯಾಗಿ ನಡೆಯುತ್ತಿದೆ. ಈ ಬಾರಿ ಆಗಸ್ಟ್ 19, 20 ಹಾಗೂ 21ರಂದು ಈ ಸಮಾರಂಭ ನಡೆಯಲಿದೆ. ಪ್ರತಿವರ್ಷ ಭಾರತದ ಸ್ವಾತಂತ್ರ್ಯೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಯಾರಿಗೆ ‘ಫಾಗ್ ಹೀರೋ’?

ಹೆಚ್ಚಾಗಿ ಚಿತ್ರರಂಗದಲ್ಲಿ ಸಾಧನೆ ಮಾಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತಿದೆ. ಆಶಾ ಪರೇಕ್, ಅಮಿತಾಬ್ ಬಚ್ಚನ್, ದೇವಾನಂದ್, ವಿನೋದ್ ಖನ್ನಾ, ಧರ್ಮೇಂದ್ರ ಮುಂತಾದ ಸಿನಿರಂಗದ ಗಣ್ಯರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಬಾರಿ ದಕ್ಷಿಣ ಭಾರತದ ಖ್ಯಾತ ನಟಿ ಮೇಘನರಾಜ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕಾರ್ಯಕ್ರಮದ ಸಂಘಟಕರಾದಕ್ರಿಸ್ ಮೂರ್ತಿ ಮಾಹಿತಿ ನೀಡಿದರು.

‘ಅಮಿತಾಭ್ ಬಚ್ಚನ್, ಧರ್ಮೇಂದ್ರ ಮುಂತಾದ ಗಣ್ಯರು ಪಡೆದಿರುವ ಈ ಪ್ರತಿಷ್ಠಿತ ಪ್ರಶಸ್ತಿಗೆ ನಾನು ಭಾಜನಳಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಅಂತಹ ಮಹಾನ್ ನಟರಿಗೆ ಸಂದಿರುವ ಪ್ರಶಸ್ತಿಗೆ ಈ ಬಾರಿ ನಾನು ಆಯ್ಕೆಯಾಗಿರುವುದು ನನ್ನ ಪುಣ್ಯ. ನನ್ನ ತಂದೆಯ ಮೂಲಕ ಈ ವಿಷಯ ನನಗೆ ತಿಳಿಯಿತು. ಆಗಸ್ಟ್ 21ರಂದು ಈ ಪ್ರಶಸ್ತಿ ಸ್ವೀಕರಿಸಲಿದ್ದೇನೆ. ಕನ್ನಡ ಚಿತ್ರರಂಗ ಈಗ ಇಡೀ ವಿಶ್ವದಾದ್ಯಂತ ಜನಪ್ರಿಯ. ಕನ್ನಡಿಗಳಾಗಿ ಈ ಪ್ರಶಸ್ತಿ ಸಿಗುತ್ತಿರುವುದು ನನಗೆ ಹೆಚ್ಚಿನ ಖುಷಿಯಾಗಿದೆ’ ಎಂದರು ನಟಿ ಮೇಘನಾರಾಜ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.