ನೈಜ ಘಟನೆಯನ್ನಾಧರಿಸಿದ ‘ತನುಜಾ’ ಚಿತ್ರದಲ್ಲಿ ‘ಆರೋಗ್ಯ ಸಚಿವ’ನ ಪಾತ್ರಕ್ಕೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬಣ್ಣಹಚ್ಚಿದ್ದಾರೆ.

ತನುಜಾ ಎಂಬ ವಿದ್ಯಾರ್ಥಿನಿ ಕೋವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲಾಗದೆ ತನ್ನ ಅಸಹಾಯಕತೆಯನ್ನು ತೋಡಿಕೊಂಡಿದ್ದ ಸಂದರ್ಭದಲ್ಲಿ ಪತ್ರಕರ್ತರ ಸಹಕಾರದಿಂದ ಪರೀಕ್ಷೆ ಬರೆದುವೈದ್ಯಕೀಯ ಸೀಟು ಪಡೆದಿದ್ದು ದೇಶದ ಗಮನ ಸೆಳೆದಿತ್ತು. ಈ ನೈಜ ಘಟನೆಯಾಧಾರಿತ ವರದಿ ಆಧರಿಸಿ ಸಿನಿಮಾ ಕೆಲ ತಿಂಗಳ ಹಿಂದೆ ಸೆಟ್ಟೇರಿತ್ತು. ಚಿತ್ರದಲ್ಲಿ ಮುಖ್ಯಮಂತ್ರಿ ಪಾತ್ರದಲ್ಲಿ ಶಾಸಕ ಬಿ.ಎಸ್.ಯಡಿಯೂರಪ್ಪ ನಟಿಸಿದ್ದರು.ಹರೀಶ್ ಎಂ.ಡಿ ಹಳ್ಳಿಯವರು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

‘ಸುಧಾಕರ್ ಅವರು ಅನುಭವಿ ಕಲಾವಿದರ ರೀತಿ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದು ಅದ್ಭುತವಾಗಿ ನಟಿಸಿದ್ದಾರೆ. ಜೊತೆಗೆ ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡಿದ್ದಾರೆ’ ಎಂದು ಚಿತ್ರತಂಡ ತಿಳಿಸಿದೆ. ‘ಬಿಯಾಂಡ್ ವಿಷನ್ಸ್ ಸಿನಿಮಾಸ್’ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶಿವಮೊಗ್ಗ ಸುತ್ತಮುತ್ತ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರದ ಚಿತ್ರೀಕರಣ ನಡೆದಿದೆ.

ಚಿತ್ರದ ತಾರಾಗಣದಲ್ಲಿ ರಾಜೇಶ್ ನಟರಂಗ, ಸಪ್ತಾ ಪಾವೂರ್, ಬಿ.ಎಸ್ ಯಡಿಯೂರಪ್ಪ, ಡಾ.ಕೆ.ಸುಧಾಕರ್, ವಿಶ್ವೇಶ್ವರ ಭಟ್, ಸಂಧ್ಯಾ ಅರಕೆರೆ, ಕೈಲಾಶ್, ಬಾಲನಟಿ ಬೇಬಿ ಶ್ರೀ ಇದ್ದಾರೆ. ಪ್ರದ್ಯೋತನ ಅವರ ಸಂಗೀತ ನಿರ್ದೇಶನ, ರವೀಂದ್ರನಾಥ್ ಹಾಗೂ ಮೋಹನ್.ಎಲ್ ರಂಗಕಹಳೆ ಅವರ ಛಾಯಾಗ್ರಹಣ, ಉಮೇಶ್ ಆರ್.ಬಿ ಸಂಕಲನ ಚಿತ್ರಕ್ಕಿದೆ.

ನಟಿ ಪ್ರೇಮ ‘ವೆಡ್ಡಿಂಗ್ ಗಿಫ್ಟ್’ ಜೂನ್ನಲ್ಲಿ ಬಿಡುಗಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.