ಢಾಕಾ: ಬಾಂಗ್ಲಾದೇಶ ನಟಿ ರೈಮಾ ಶಿಮು ಅವರ ಮೃತದೇಹ ಇಲ್ಲಿನ ಹೊರವಲಯದಲ್ಲಿ ಪತ್ತೆಯಾಗಿದೆ ಎಂದು ಬಾಂಗ್ಲಾ ಪೊಲೀಸರು ತಿಳಿಸಿದ್ದಾರೆ.

ಹಜಾರತ್‌ಪುರ ಸಮೀಪದಲ್ಲಿರುವ ಸೇತುವೆ ಬಳಿ ರೈಮಾ ಅವರ ಮೃತದೇಹ ಪತ್ತೆಯಾಗಿದೆ. ಅವರು ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ರೈಮಾ ಪತಿ ಹಾಗೂ ಕುಟುಂಬದವರು ದೂರ ದಾಖಲಿಸಿದ್ದರು.

ಮೃತದೇಹವನ್ನು ವಶಕ್ಕೆ ಪಡೆದಿರುವ ಪೊಲೀಸರು ಶವ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರಗೆ ಕಳುಹಿಸಿದ್ದಾರೆ. ಈ ಪ್ರಕರಣದ ತನಿಖೆ ಕೈಗೊಂಡಿರುವ ಪೊಲೀಸರು ರೈಮಾ ಪತಿ ಹಾಗೂ ಕಾರು ಚಾಲಕನನ್ನು ಬಂಧಿಸಿ,ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ರೈಮಾ ಅವರು 1998ರಲ್ಲಿ ಸಿನಿಮಾ ಕ್ಷೇತ್ರಕ್ಕೆ ಪಾದರ್ಪಣೆ ಮಾಡಿದರು. ಅವರು 25ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.