ಪೋಸ್ಟರ್ನಿಂದಲೇ ಗಮನ ಸೆಳೆದಿದ್ದ ‘ಮಿಸ್ಟರ್ ರಾಣಿ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಈ ಹಿಂದೆ ‘ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ’ ಚಿತ್ರ ನಿರ್ದೇಶಿಸಿದ್ದ ಮಧುಚಂದ್ರ ನಿರ್ದೇಶಿಸಿರುವ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ನಾಯಕ ಆಗಬೇಕೆಂದು ಎಂಜಿನಿಯರಿಂಗ್ ಮುಗಿಸಿ ಸಿನಿಮಾರಂಗಕ್ಕೆ ಬಂದ ಹುಡುಗ ಆಕಸ್ಮಿಕವಾಗಿ ನಾಯಕಿಯಾಗಿಬಿಡುತ್ತಾನೆ. ಮುಂದೆ ಏನೆಲ್ಲ ನಡೆಯುತ್ತದೆ ಎಂಬುದನ್ನು ಚಿತ್ರದಲ್ಲಿ ಹಾಸ್ಯಮಯವಾಗಿ ಹೇಳಲಾಗಿದೆ ಎಂಬ ಮುನ್ಸೂಚನೆ ನೀಡುತ್ತಿದೆ ಚಿತ್ರದ ಟೀಸರ್.

ಕಿರುತೆರೆ ನಟ ದೀಪಕ್ ಸುಬ್ರಹ್ಮಣ್ಯ ರಾಣಿಯಾಗಿ ಕಾಣಿಸಿಕೊಂಡಿದ್ದಾರೆ. ಪಾರ್ವತಿ ನಾಯರ್, ಶ್ರೀವತ್ಸ, ಮಧುಚಂದ್ರ, ರೂಪ ಪ್ರಭಾಕರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಎಕ್ಸೆಲ್ ಆರ್ಬಿಟ್ ಕ್ರಿಯೇಷನ್ಸ್ ಸಂಸ್ಥೆ ಬಂಡವಾಳ ಹೂಡಿದೆ. ಜೂಡಾ ಸ್ಯಾಂಡಿ ಹಾಗೂ ರಿತ್ವಿಕ್ ಮುರಳೀಧರ್ ಸಂಗೀತ, ರವೀಂದ್ರನಾಥ್ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.