ಮೈಸೂರು: ಸಂಗೀತ ನಿರ್ದೇಶಕ ಅರ್ಜುನ ಜನ್ಯ ಅವರು ಇಲ್ಲಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಲ್ಲಿ ಆ್ಯಂಜಿಯೊ ಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ.

39 ವರ್ಷ ವಯಸ್ಸಿನ ಅವರು ಲಘು ಹೃದಯಾಘಾತಕ್ಕೆ ಒಳಗಾಗಿ ಫೆ.23ರಂದು ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದರು.

26 ರಂದು ಮಧ್ಯರಾತ್ರಿ 2 ಗಂಟೆಗೆ ವೈದ್ಯ ಆದಿತ್ಯ ಉಡುಪ ಹಾಗೂ ತಂಡ ಕೊರೊನರಿ ಆ್ಯಂಜಿಯೊಗ್ರಾಂ ಹಾಗೂ ಆ್ಯಂಜಿಯೊ ಪ್ಲಾಸ್ಟಿ ಚಿಕಿತ್ಸೆ ನೆರವೇರಿಸಿದೆ. ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ.

ಜನ್ಯ ಅವರನ್ನು ಈಗ ಐಸಿಯುನಿಂದ ವಾರ್ಡ್ ಗೆ ಸ್ಥಳಾಂತರಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಗೆ ಬರುವುದು 2 ತಾಸು ತಡವಾಗಿದ್ದರೂ ಕಷ್ಟವಾಗುತ್ತಿತ್ತುಎಂದು ಅಪೋಲೊ ಆಸ್ಪತ್ರೆ ಹೆಲ್ತ್ ಕೇರ್ ಸರ್ವೀಸಸ್ ವ್ಯವಸ್ಥಾಪಕ ಸಿ.ಬಿ.ದಕ್ಷ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.