ಭಕ್ತಿ ಪ್ರಧಾನ ‘ತಾರಕೇಶ್ವರ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೆ ಬಿಡುಗಡೆಗೊಂಡಿದೆ. ಪುರುಷೋತ್ತಮ್ ಓಂಕಾರ್ ನಿರ್ದೇಶನದ ಚಿತ್ರ ಶಿವಪುರಾಣದ ತಾರಕಾಸುರನ ಕಥೆಯನ್ನು ಹೊಂದಿದೆ. ಗಣೇಶ್ ರಾವ್ ಕೇಸರ್ಕರ್ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ಪ್ರಮುಖ ಪಾತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

‘ನಮ್ಮ ಸಿನಿಮಾ ತೆರೆಗೆ ಬರಲು ಸಿದ್ದವಾಗಿದೆ. ಸೆನ್ಸಾರ್ನವರು ‘ಯು’ ಪ್ರಮಾಣ ಪತ್ರ ನೀಡಿದ್ದಾರೆ. ನಾನು ಯಾವತ್ತೂ ಹಣಕ್ಕೆ ಪ್ರಾಮುಖ್ಯತೆ ಕೊಟ್ಟಿಲ್ಲ. ಉತ್ತಮ ಚಿತ್ರವನ್ನು ಕನ್ನಡಿಗರಿಗೆ ನೀಡಬೇಕೆಂದು ಈ ಚಿತ್ರ ನಿರ್ಮಾಣ ಮಾಡಿದ್ದೇನೆ. ಪೌರಾಣಿಕ ಚಿತ್ರ ಮಾಡುವುದು ಸುಲಭದ ಮಾತಲ್ಲ. ಚಿತ್ರ ಬಿಡುಗಡೆಗೆ ವಿಭಿನ್ನ ಹೆಜ್ಜೆ ಇಟ್ಟಿದ್ದೇವೆ. ಈಗಾಗಲೇ ಚಿತ್ರದ ಟಿಕೆಟ್ನ್ನು ಮುದ್ರಿಸಿ ಮಾರಲಾಗುತ್ತಿದ್ದು, ಇದನ್ನು ಖರೀದಿಸಿದವರು ಚಿತ್ರ ಬಿಡುಗಡೆಯಾದಾಗ ಕರ್ನಾಟಕದ ಯಾವುದೇ ಜಿಲ್ಲೆ, ತಾಲ್ಲೂಕು ಕೇಂದ್ರದಲ್ಲಿ ಸಿನಿಮಾ ವೀಕ್ಷಿಸಬಹುದು’ ಎಂದರು ಗಣೇಶ್ ರಾವ್.

‘ಶಿವಪುರಾಣದ ತಾರಕಾಸುರ ತಂದೆ ಕೊಂದವನ ಮೇಲೆ ಸೇಡು ತೀರಿಸಿಕೊಳ್ಳಲು ತಪಸ್ಸು ಮಾಡಿ ತನಗೆ ಸಾವು ಬರಬಾರದೆಂದು ಬ್ರಹ್ಮನಿಂದ ವರ ಪಡೆದುಕೊಳ್ಳುತ್ತಾನೆ. ಆತ ಮುಂದೆ ಯಾವ ರೀತಿ ಹೋರಾಟ ಮಾಡುತ್ತಾನೆ ಎಂಬುನ್ನು ಕುತೂಹಲದ ಸನ್ನಿವೇಶಗಳೊಂದಿಗೆ ತೋರಿಸಲಾಗಿದೆ. ಬೆಂಗಳೂರು, ಶ್ರೀರಂಗಪಟ್ಟಣ, ಮೈಸೂರು ಮೊದಲಾದೆಡೆ ಚಿತ್ರೀಕರಣ ನಡೆಸಿದ್ದೇವೆ’ ಎಂದರು ನಿರ್ದೇಶಕರು.

ಪಾರ್ವತಿಯಾಗಿ ರೂಪಾಲಿ ಕಾಣಿಸಿ ಕೊಂಡಿದ್ದಾರೆ. ಬಾಲನಟಿ ಋತುಸ್ಪರ್ಶ, ಸುಮಿತ ಪ್ರವೀಣ್ ಮುಂತಾದವರು ಚಿತ್ರದಲ್ಲಿದ್ದಾರೆ. ರಾಜ್ಭಾಸ್ಕರ್ ಸಂಗೀತ, ಮುತ್ತುರಾಜ್ ಛಾಯಾ ಚಿತ್ರಗ್ರಹಣ, ಅನಿಲ್ಕುಮಾರ್ ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.