ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ನಿದ್ರಾದೇವಿ Next Door’ ಚಿತ್ರೀಕರಣ ಮುಕ್ತಾಯ

Published : 4 ಅಕ್ಟೋಬರ್ 2024, 23:30 IST
Last Updated : 4 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments

ಸುರಮ್ ಮೂವೀಸ್ ನಿರ್ಮಾಣದ ಯುವ ನಟ ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ನಿದ್ರಾದೇವಿ Next Door ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ.

ರಾಜರಾಜೇಶ್ವರಿ ನಗರದಲ್ಲಿ ಕೊನೆಯ ಹಂತದ ಶೂಟಿಂಗ್ ಮುಗಿಸಿ ಕುಂಬಳಕಾಯಿ ಹೊಡೆಯಲಾಯಿತು. ಈ ವೇಳೆ ಚಿತ್ರದ ಎಲ್ಲಾ ಕಲಾವಿದರು, ತಂತ್ರಜ್ಞಾನರು ಹಾಗೂ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಕೂಡ ಭಾಗಿಯಾಗಿದ್ದರು.

ಚಿತ್ರದಲ್ಲಿ ಪ್ರವೀರ್ ಶೆಟ್ಟಿ, ರಿಷಿಕಾ ನಾಯಕ್ ನಾಯಕ ನಾಯಕಿಯಾಗಿ ಕಾಣಿಸಿಕೊಂಡಿದ್ದು,   ಶೈನ್ ಶೆಟ್ಟಿ ಹಾಗೂ  ಶ್ರುತಿ ಹರಿಹರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸುಧಾರಾಣಿ, ಶ್ರೀವತ್ಸ, ಐಶ್ವರ್ಯ ಗೌಡ, ಅನೂಪ್, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ನಿರ್ಮಾಪಕರಾದ ಜಯರಾಮ್ ದೇವಸಮುದ್ರ ಅವರು ತಮ್ಮ ಸುರಮ್ ಮೂವೀಸ್ ಬ್ಯಾನರ್‌ನಡಿ ನಿರ್ಮಿಸಿದು, ಈ ಹಿಂದೆ ಇದೇ ಸಂಸ್ಥೆಯಲ್ಲಿ ‘ರೇವ್ ಪಾರ್ಟಿ’ ಮತ್ತು ‘ಎಂಗೇಜ್ಮೆಂಟ್ ’ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.  ಈ ಚಿತ್ರಕ್ಕೆ ನಕುಲ್ ಅಭ್ಯಂಕರ್ ಅವರ ಸಂಗೀತ, ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ, ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT