ಹತ್ತು ವರ್ಷಗಳ ಹಿಂದೆ ಚಂದನವನದಲ್ಲಿ ಸದ್ದು ಮಾಡಿದ್ದ ಸಿನಿಮಾ ‘ರಂಗಿತರಂಗ’. ಆ ಸಿನಿಮಾದಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ ಸಾಯಿಕುಮಾರ್ ಹಾಗೂ ನಾಯಕನಾಗಿ ನಟಿಸಿದ್ದ ನಿರೂಪ್ ಭಂಡಾರಿ, ಇದೀಗ ಹೊಸ ಪ್ರಾಜೆಕ್ಟ್ ಒಂದರಲ್ಲಿ ತಂದೆ–ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ.

ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಸಚಿನ್ ವಾಲಿ ಸಾರಥ್ಯದ ಸಿನಿಮಾದಲ್ಲಿ ನಿರೂಪ್ ಹಾಗೂ ಸಾಯಿಕುಮಾರ್ ಮತ್ತೆ ಜೊತೆಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಚಿತ್ರೀಕರಣ ಆರಂಭವಾಗಿದೆ. ಚಿತ್ರದ ಶೀರ್ಷಿಕೆ ಮತ್ತು ಫಸ್ಟ್ಲುಕ್ ಫೆ.6ಕ್ಕೆ ಅನಾವರಣಗೊಳ್ಳುತ್ತಿದೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ‘ಶಿವಾನಿ’ಯಾಗಿ ಮಿಂಚಿದ ಬೃಂದಾ, ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ಇದೇ ಚಿತ್ರದಲ್ಲಿ ನಟಿ ಅಂಕಿತಾ ಅಮರ್ ವರದಿಗಾರ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ ಮತ್ತು ಫ್ಯಾಮಿಲಿ ಎಂಟರ್ಟೈನರ್ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ ಎಂದಿದೆ ಚಿತ್ರತಂಡ. ಅಂಕಿತ್ ಸೋನಿಗಾರ ಈ ಚಿತ್ರ ನಿರ್ಮಿಸಿಸುತ್ತಿದ್ದು, ಪ್ರಶಾಂತ್ ಮುಲಗೆ ಸಹ ನಿರ್ಮಾಪಕರಾಗಿದ್ದಾರೆ. ಸಚಿನ್ ಬಸ್ರೂರ್ ಸಂಗೀತ, ಸಂದೀಪ್ ವಲ್ಲೂರಿ ಛಾಯಾಚಿತ್ರಗ್ರಹಣ, ಉಜ್ವಲ್ ಚಂದ್ರ ಸಂಕಲನ, ಉಲ್ಲಾಸ್ ಹೈದೂರು ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.