ಮಾರ್ಚ್ 11ರಂದು ಬಿಡುಗಡೆಗೆ ಸಿದ್ಧವಾಗಿರುವ ‘ರಾಬರ್ಟ್’ ಚಿತ್ರದ ತೆಲುಗು ಆವೃತ್ತಿಯ ಬಿಡುಗಡೆಗೆ ಆಂಧ್ರ ಪ್ರದೇಶದಲ್ಲಿ ವಿರೋಧ ವ್ಯಕ್ತವಾಗಿದೆ. ಅದೇ ದಿನ ತೆಲುಗಿನ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಅದೇ ಹೊತ್ತಿನಲ್ಲಿ ಕನ್ನಡದ ಡಬ್ ಸಿನಿಮಾ ‘ರಾಬರ್ಟ್’ನ್ನು ಬಿಡುಗಡೆ ಮಾಡುವಂತಿಲ್ಲ ಎಂದು ಅಲ್ಲಿನ ಚಿತ್ರರಂಗ ನಿರ್ಧರಿಸಿದ್ದು ರಾಬರ್ಟ್ಗೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಅವಕಾಶ ಕೊಡಬಾರದು ಎಂದು ಸೂಚನೆ ನೀಡಿದೆ.

ತೆಲುಗು ಚಿತ್ರರಂಗದ ಈ ನಿರ್ಧಾರದಿಂದ ರಾಬರ್ಟ್ ಚಿತ್ರತಂಡವೂ ಆತಂಕಕ್ಕೆ ಒಳಗಾಗಿದೆ. ನಟ ದರ್ಶನ್ ಕೂಡಾ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಧ್ಯಾಹ್ನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಸಂಬಂಧಿಸಿ ಸಭೆ ನಡೆದಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಅವರೂ ಕೂಡಾ ಸಭೆಯಲ್ಲಿ ಭಾಗವಹಿಸಿದ್ದಾರೆ.

‘ಕರ್ನಾಟಕದಲ್ಲಿ ತೆಲುಗು ಚಿತ್ರಗಳು ಯಾವುದೇ ಅಡ್ಡಿ ಆತಂಕಗಳಿಲ್ಲದೇ ಬಿಡುಗಡೆ ಆಗುತ್ತಿವೆ. ಆದರೆ, ಟಾಲಿವುಡ್ ಕನ್ನಡ ಚಿತ್ರಗಳಿಗೆ ನಿರ್ಬಂಧ ಹೇರಿರುವುದು ಸರಿಯಲ್ಲ. ಅವರು ತಮ್ಮ ನಿರ್ಧಾರ ಬದಲಾಯಿಸಬೇಕು ಎಂದು ಒತ್ತಾಯಿಸಿದ್ದಾರೆ. ಯಾವುದೇ ಅಡ್ಡಿ ಆತಂಕಗಳಿದ್ದರೂ ನಿಗದಿಯಂತೆ ಮಾರ್ಚ್ 11ರಂದು ರಾಬರ್ಟ್ ಚಿತ್ರದ ತೆಲುಗು ಆವೃತ್ತಿಯನ್ನೂ ಬಿಡುಗಡೆ ಮಾಡುತ್ತೇವೆ. ಸಮಸ್ಯೆ ಬಗೆಹರಿಯುವ ವಿಶ್ವಾಸವಿದೆ’ ಎಂದು ದರ್ಶನ್ ಮಾಧ್ಯಮಗಳಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.