ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಒಟಿಟಿ ಪ್ಲಾಟ್ಫಾರಂಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು ಒಟಿಟಿ ಪ್ಲಾಟ್ಫಾರಂಗಳು ಸನ್ನದ್ಧವಾಗುತ್ತಿವೆ.

ಇದೀಗ ಗ್ರಾಹಕರಸ್ನೇಹಿ ಒಟಿಟಿಯಾಗಿ ‘ಒಟಿಟಿ ಪ್ಲೇಯರ್’ ಪ್ರಾರಂಭವಾಗಿದೆ. ಇದು ಆ್ಯಪ್ ಅಲ್ಲ, ಹಾರ್ಲೀ ಎಂಟರ್ಟೈನ್ ಮೆಂಟ್ ಮೀಡಿಯಾ ಸಂಸ್ಥೆಯಡಿ ಗೀತಾ ಕೃಷ್ಣನ್ ರಾವ್ ಹಾಗೂ ಮುರಳಿರಾವ್ ಅವರು ಅಭಿವೃದ್ದಿಪಡಿಸಿರುವ ವೆಬ್ಸೈಟ್. ಇದರ ಮೂಲಕ ಯಾವುದೇ ಅಡೆತಡೆಗಳಿಲ್ಲದೆ, ಜಾಹೀರಾತು ಮುಕ್ತವಾಗಿ ನೆಚ್ಚಿನ ಚಲನಚಿತ್ರಗಳನ್ನು ವೀಕ್ಷಿಸಬಹುದಾಗಿದೆ.

ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಎಸ್.ಎ.ಚಿನ್ನೇಗೌಡರು ಅತಿಥಿಗಳಾಗಿ ಪಾಲ್ಗೊಂಡು ಶುಭಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ನಿರ್ದೇಶಕ ಮುರಳಿರಾವ್, ‘ಇದೊಂದು ಪ್ರಯೋಗ, ಪ್ರಯತ್ನ. ನಿರ್ಮಾಪಕರೊಬ್ಬರು ನಮ್ಮನ್ನು ಭೇಟಿ ಮಾಡಿ ತಮ್ಮ ಕಷ್ಟ ಹೇಳಿಕೊಂಡಾಗ ಈ ಆಲೋಚನೆ ಬಂತು. ಈಗ ಎಲ್ಲರೂ ಒಟಿಟಿಯಲ್ಲಿ ಚಿತ್ರ ಯಾವಾಗ ಬರುತ್ತೆ ಅಂತ ಕಾಯುತ್ತಾರೆ. ನಮ್ಮ ವೆಬ್ಸೈಟ್ಗೆ ಲಾಗಿನ್ ಆಗಿ ಅಲ್ಪದರ ಪಾವತಿಸಿ ಹೊಸ ಚಿತ್ರಗಳನ್ನು ನೋಡಬಹುದು. ಇದನ್ನು ಆನ್ಲೈನ್ ಥೇಟರ್ ಅನ್ನಬಹುದು. ಬಂದ ಹಣದಲ್ಲಿ ನಿರ್ಮಾಪಕರಿಗೆ ಶೇ 70 ಶೇರ್ ಕೊಡುತ್ತೇವೆ. ಅಲ್ಲದೆ ಉತ್ತಮ ಕಿರುಚಿತ್ರಗಳನ್ನು ಕೂಡ ನಮ್ಮ ವೆಬ್ಸೈಟ್ನಲ್ಲಿ ಹಾಕುತ್ತೇವೆ’ ಎಂದು ವಿವರಿಸಿದರು.

ಹಿರಿಯ ನಿರ್ಮಾಪಕ ಚಿನ್ನೇಗೌಡ್ರು ಮಾತನಾಡಿ, ಇಂಥ ಪ್ರಯತ್ನಗಳು ನಡೆದರೆ ಬಡನಿರ್ಮಾಪಕರಿಗೆ ಒಂದಷ್ಟು ಅನುಕೂಲವಾಗುತ್ತದೆ ಎಂದು ಹೇಳಿದರು.

ನಿರ್ದೇಶಕ ಸಾಯಿಪ್ರಕಾಶ್ ಮಾತನಾಡಿ, ರೆಗ್ಯುಲರ್ ಒಟಿಟಿಗಿಂತ ಇದು ವಿಭಿನ್ನವಾಗಿದೆ. ಎಲ್ಲಾ ಭಾಷೆಯ ಚಿತ್ರಗಳನ್ನು ನೋಡುವ ಅವಕಾಶ ಸಿಗುತ್ತದೆ. ಯಾವುದೇ ಹೊಸ ಸಿನಿಮಾ ಬಂದ ಕೂಡಲೇ ನೋಡುತ್ತೇನೆ. ಇದರ ಬಗ್ಗೆ ಕ್ರೇಜ್ ಹುಟ್ಟಬೇಕಂದ್ರೆ ಒಳ್ಳೊಳ್ಳೆ ಸಿನಿಮಾ ಬರಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.