ಹೈದರಾಬಾದ್: ವಿದ್ಯಾರ್ಥಿಗಳು ಮತ್ತು ಪೋಷಕರನ್ನುದಾರಿ ತಪ್ಪಿಸುವ ಜಾಹೀರಾತಿನಲ್ಲಿ ನಟ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ.

ತೆಲಂಗಾಣದ ಸಾಮಾಜಿಕ ಕಾರ್ಯಕರ್ತಕೋತ ಉಪೇಂದ್ರ ರೆಡ್ಡಿ ಅವರು ಇಲ್ಲಿನಅಂಬರ್‌ಪೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶೈಕ್ಷಣಿಕ ಸಂಸ್ಥೆಯೊಂದರ ಜಾಹೀರಾತಿನಲ್ಲಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ, ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲು ಅರ್ಜುನ್ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಚೈತನ್ಯ ಶೈಕ್ಷಣಿಕಜಾಹೀರಾತಿನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದರು. ಇದರಲ್ಲಿ ಅವರು ಸಂಸ್ಥೆಯಲ್ಲಿ ಅಗ್ರ ಶ್ರೇಣಿ ಪಡೆದವರ ಬಗ್ಗೆ ಮಾಹಿತಿ ನೀಡಿದ್ದರು. ಆದರೆ ಜಾಹೀರಾತಿನಲ್ಲಿ ಅಲ್ಲು ಅರ್ಜುನ್ ಅವರು ನೀಡಿರುವ ಅಂಕಿ ಅಂಶಗಳು ತಪ್ಪಾಗಿವೆ ಎಂದು ಉಪೇಂದ್ರ ರೆಡ್ಡಿ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: 'ಸ್ತನಗಳ ಗಾತ್ರ ಹೆಚ್ಚಿಸಿಕೊಳ್ಳಿ':ಮುಜುಗರದ ಅನುಭವಗಳನ್ನು ತೋಡಿಕೊಂಡ ನಟಿ ರಾಧಿಕಾ

ಈ ಘಟನೆ ಬಗ್ಗೆ ಅಲ್ಲು ಅರ್ಜುನ್ ಯಾವುದೇ ಹೇಳಿಕೆ ನೀಡಿಲ್ಲ. ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಕೆಲವರು ಅಲ್ಲು ಅರ್ಜುನ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ವಿವಾದಿತ ಜಾಹೀರಾತುಗಳಲ್ಲಿ ಅಭಿನಯಿಸುವುದು ಬೇಡ ಎಂದು ಕೆಲ ಅಭಿಮಾನಿಗಳು ಸಲಹೆ ಮಾಡಿದ್ದಾರೆ.

ಇದನ್ನೂ ಓದಿ:ಖ್ಯಾತ ಫ್ಯಾಷನ್ ಡಿಸೈನರ್ ಪ್ರತ್ಯುಶಾ ಅನುಮಾನಾಸ್ಪದ ಸಾವು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.