ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಟಿಸಿರುವ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಏ.1ರಂದು ಕನ್ನಡ ಹಾಗೂ ತೆಲುಗಿನಲ್ಲಿ ತೆರೆಯ ಮೇಲೆ ಬರಲಿದ್ದು, ಚಿತ್ರದ ಯಶಸ್ಸಿಗಾಗಿ ಶಿರಡಿ ಸಾಯಿಬಾಬಾ ಹಾಗೂ ಕೋಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆಪುನೀತ್ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

ಜೊತೆಯಲ್ಲಿ ಚಿತ್ರದ ನಿರ್ದೇಶಕ ಸಂತೋಷ್ ಆನಂದರಾಮ್, ನಿರ್ಮಾಪಕರಾದ ವಿಜಯ್ ಕಿರಗಂದೂರು ಇದ್ದರು. ಚಿತ್ರದಲ್ಲಿ ಪುನೀತ್, ಬಹಳ ವರ್ಷಗಳ ಬಳಿಕ ಕಾಲೇಜು ವಿದ್ಯಾರ್ಥಿಯಾಗಿ ಬಣ್ಣಹಚ್ಚಿದ್ದಾರೆ. ಅವರನ್ನು ಈ ಲುಕ್ನಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಚಿತ್ರದ ಬಹುನಿರೀಕ್ಷಿತ ಹಾಡು ‘ಪಾಠಶಾಲಾ’ ಲಿರಿಕಲ್ ವಿಡಿಯೊ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಜನರು ತಮ್ಮ ಶಾಲಾ–ಕಾಲೇಜು ದಿನಗಳನ್ನು ಮೆಲುಕು ಹಾಕುವಂತಿದೆ. ಈಗಾಗಲೇ ಯೂಟ್ಯೂಬ್ನಲ್ಲಿ ಇದು 39 ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದಿದೆ. ಈ ಚಿತ್ರಕ್ಕೆ ತಮನ್ ಎಸ್.ಸಂಗೀತ ನೀಡಿದ್ದಾರೆ. ಚಿತ್ರದ ಪವರ್ ಆಫ್ ಯೂತ್, ನೀನಾದೆ ನಾ ಮತ್ತು ಊರಿಗೊಬ್ಬ ರಾಜ ಹಾಡು ಕೂಡಾ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.