ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Wayanad Landslide: ಸಂತ್ರಸ್ತರ ನೆರವಿಗೆ ₹2 ಕೋಟಿ ದೇಣಿಗೆ ನೀಡಿದ ನಟ ಪ್ರಭಾಸ್

Published : 7 ಆಗಸ್ಟ್ 2024, 10:15 IST
Last Updated : 7 ಆಗಸ್ಟ್ 2024, 10:15 IST
ಫಾಲೋ ಮಾಡಿ
Comments

ನವದೆಹಲಿ: ಭಾರಿ ಭೂಕುಸಿತಕ್ಕೆ ತುತ್ತಾಗಿರುವ ಕೇರಳಕ್ಕೆ ನಟ ಪ್ರಭಾಸ್‌ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ (ಸಿಎಮ್‌ಡಿಆರ್‌ಎಫ್) ₹2ಕೋಟಿ ದೇಣಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕೇರಳದ ವಯನಾಡಿನಲ್ಲಿ ಸಂಭವಿಸಿದ ಸರಣಿ ಭೂಕುಸಿತದಿಂದಾಗಿ ನೂರಾರು ಮಂದಿ ಪ‍್ರಾಣ ಕಳೆದುಕೊಂಡಿದ್ದಾರೆ. ವಿನಾಶದ ಭೂಕುಸಿತದಿಂದಾಗಿ ಕಂಗೆಟ್ಟ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸುವ ಹಾಗೂ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ನಟ ಪ್ರಭಾಸ್‌ ಅವರು ಇಂದು (ಬುಧವಾರ) ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ₹2 ಕೋಟಿ ದೇಣಿಗೆ ನೀಡಿದ್ದಾರೆ ಎಂದು ನಟನ ಆಪ್ತ ಮೂಲಗಳು ಸುದ್ದಿಸಂಸ್ಥೆ 'ಪಿಟಿಐ'ಗೆ ತಿಳಿಸಿವೆ.

ಪ್ರಭಾಸ್‌ ಇತ್ತೀಚೆಗೆ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಅಭಿನಯಿಸಿದ್ದರು. ಈ ಚಿತ್ರವು ಜಾಗತಿಕವಾಗಿ ₹1000 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿತ್ತು.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಮಲ್ ಹಾಸನ್ ₹25 ಲಕ್ಷ , ಸೂರ್ಯ, ಜ್ಯೋತಿಕಾ ಮತ್ತು ಕಾರ್ತಿ ₹50 ಲಕ್ಷ, ಮಮ್ಮುಟ್ಟಿ ₹20 ಲಕ್ಷ, ದುಲ್ಕರ್ ಸಲ್ಮಾನ್ ₹15 ಲಕ್ಷ, ಫಹಾದ್ ಫಾಸಿಲ್ ಮತ್ತು ನಜ್ರಿಯಾ ₹25 ಮತ್ತು ಟೊವಿನೋ ಥಾಮಸ್ ₹25 ಲಕ್ಷ, ನಟ ಚಿರಂಜೀವಿ ಮತ್ತು ರಾಮ್‌ಚರಣ್‌ ₹1 ಕೋಟಿ ನೀಡಿದ್ದಾರೆ ಎಂದು ವರದಿಯಾಗಿದೆ.

ಸರಣಿ ಭೂಕುಸಿತದಿಂದಾಗಿ 300ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, ನೂರಾರು ಜನರು ಗಾಯಗೊಂಡಿದ್ದಾರೆ, 300ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT