ಪ್ರಜ್ವಲ್ ದೇವರಾಜ್ ನಟನೆಯ 40ನೇ ಸಿನಿಮಾದ ಶೀರ್ಷಿಕೆ ಘೋಷಣೆಯಾಗಿದ್ದು, ಡೈನಾಮಿಕ್ ಪ್ರಿನ್ಸ್ ‘ಕರಾವಳಿ’ಯತ್ತ ಹೆಜ್ಜೆ ಹಾಕಿದ್ದಾರೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದು, ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ಕರಾವಳಿಯ ಮಣ್ಣಿನ ಕಥಾವಸ್ತುವನ್ನು ಹಿಡಿದು ಈ ಸಿನಿಮಾ ನಿರ್ಮಾಣಗೊಂಡಿದೆ. ಮಂಗಳೂರಿನ ಸಮುದ್ರದ ತೀರದಲ್ಲೇ ಸಿನಿಮಾದ ಟೀಸರ್ ಬಿಡುಗಡೆಗೊಂಡಿದ್ದು ವಿಶೇಷ. ಚಿತ್ರದಲ್ಲಿ ಭಿನ್ನವಾದ ಒಂದು ಪಾತ್ರದಲ್ಲಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದಾರೆ. ‘ಅಂಬಿ ನಿಂಗೆ ವಯಸ್ಸಾಯ್ತೋ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿರುವ ಗುರುದತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 2ನೇ ಸಿನಿಮಾ ಇದಾಗಿದೆ.

ಟೀಸರ್ನಲ್ಲಿ ಜಗತ್ತಿಗೆ ಪ್ರವೇಶಿಸುತ್ತಿರುವ ಎರಡು ಹೊಸ ಜೀವಗಳನ್ನು ತೋರಿಸಲಾಗಿದೆ. ತಾಯಿ ಮಗುವಿಗೆ ಜನ್ಮ ನೀಡುತ್ತಿರುವ ದೃಶ್ಯದ ಜೊತೆಗೆಯೇ ಎಮ್ಮೆ ತನ್ನ ಮಗುವಿಗೆ ಜನ್ಮ ನೀಡುತ್ತಿದೆ. ಶೀರ್ಷಿಕೆಗೆ ‘ಆ್ಯನಿಮಲ್ vs ಹ್ಯೂಮನ್’ ಎಂಬ ಅಡಿಬರಹ, ಯಕ್ಷಗಾನದಲ್ಲಿ ಬರುವ ಮಹಿಷನ ಧ್ವನಿ ಬಳಕೆ, ಹಿನ್ನೆಲೆ ಸಂಗೀತ ಸಿನಿಮಾದ ಕಥೆ ಕುರಿತು ಕುತೂಹಲ ಹೆಚ್ಚಿಸಿದೆ. ಕರಾವಳಿಯ ಯಾವ ಆಚರಣೆಯನ್ನು ನಿರ್ದೇಶಕರು ತೆರೆಗೆ ತರುತ್ತಿದ್ದಾರೆ ಎನ್ನುವುದು ಇನ್ನೂ ನಿಗೂಢ. ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯು ಸದಾನಂದನ್ ಅವರ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ. ಚಿತ್ರತಂಡ ಈ ತಿಂಗಳ ಕೊನೆಯಲ್ಲಿ ಅಥವಾ ಮುಂದಿನ ವರ್ಷದ ಪ್ರಾರಂಭದಲ್ಲಿ ಚಿತ್ರೀಕರಣಕ್ಕೆ ಇಳಿಯಲಿದೆ. ಮಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.