ಬೆಂಗಳೂರು: ತಮಿಳಿನ ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಟ್ರೈಲರ್ ಯೂಟ್ಯೂಬ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಯಿತು.

ಅಣ್ಣಾತ್ತೆ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದ್ದು, ಸಿನಿಮಾ ಬಿಡುಗಡೆಗೆ ಕಾತರರಾಗಿದ್ದಾರೆ.ರಜನಿಕಾಂತ್ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ. ರಜನಿಕಾಂತ್ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್ ಲುಕ್ ನೀಡಿದ್ದಾರೆ.

ಟ್ರೈಲರ್ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ.ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ.

2020 ರಲ್ಲಿ ಎ.ಆರ್.ಮುರುಘದಾಸ್ ನಿರ್ದೇಶನದ ‘ದರ್ಬಾರ್‘ ಬಿಡುಗಡೆಯಾದ ನಂತರ ರಜನಿಕಾಂತ್ ಅವರ ಯಾವುದೇ ಸಿನಿಮಾಗಳು ಬಿಡುಗಡೆಯಾಗಿರಲಿಲ್ಲ. ಕೋವಿಡ್ ಲಾಕ್‌ಡೌನ್ ಪರಿಣಾಮದಿಂದ 'ಅಣ್ಣಾತ್ತೆ' ಚಿತ್ರದ ಶೂಟಿಂಗ್ ಮೂರು ಬಾರಿ ಮುಂದಕ್ಕೆ ಹೋಗಿತ್ತು. ಅಲ್ಲದೇ ಒಂದು ಬಾರಿ ರಜನಿ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು.

ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ' ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಸನ್ ಪಿಕ್ಚರ್ಸ್‌ನ ಕಲಾನಿಧಿ ಮಾರನ್ ನಿರ್ಮಿಸುತ್ತಿದ್ದು, ನಿರ್ದೇಶಕ ಶಿವಾ ಅವರು ನಿರ್ದೇಶಿಸುತ್ತಿದ್ದಾರೆ. ನಯನತಾರಾ, ಕೀರ್ತಿ ಸುರೇಶ್, ಖುಷ್ಬೂ, ಮೀನಾ ಹಾಗೂ ಪ್ರಕಾಶ್ ರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.