ದಿವಂಗತ ನಟ ಸಂಚಾರಿ ವಿಜಯ್ ಅವರು ನಟನೆಯ ‘ಪುಕ್ಸಟ್ಟೆಲೈಫುಪುರ್ಸೊತ್ತೇ ಇಲ್ಲ’ ಚಿತ್ರ ಇಂದು ತೆರೆಕಾಣಲಿದೆ. ಮೈಸೂರಿನಲ್ಲಿ ಈಗಾಗಲೇ ಚಿತ್ರದ ಮೊದಲ ಪ್ರೀಮಿಯರ್ ಶೋ ನಡೆದಿದ್ದು, ಸಂಚಾರಿ ವಿಜಯ್ ಅವರ ನೆನಪಿನಲ್ಲಿ ಒಂದು ಸೀಟು ಕಾಯ್ದಿರಿಸಿ ಚಿತ್ರತಂಡವು ಗೌರವ ಸಲ್ಲಿಸಿದೆ.

‘ಪುಗ್ಸಟ್ಟೆಲೈಫು...’ ಅರವಿಂದ್ ಕುಪ್ಳೀಕರ್ ನಿರ್ದೇಶನದ ಚಿತ್ರವಾಗಿದ್ದು, ಈ ಚಿತ್ರದಲ್ಲಿ ವಿಜಯ್ಗೆ ಬೀಗ ರಿಪೇರಿ ಮಾಡುವ ಕಾಯಕದ ಶಹಜಹಾನ್ ಎಂಬ ಪಾತ್ರ. ಬೀಗ ರಿಪೇರಿಯಿಂದ ಬರುವ ಸಂಪಾದನೆ ಸಾಲದಾದಾಗ ಶಹಜಹಾನ್ ಈ ವ್ಯವಸ್ಥೆಯ ಚಕ್ರಸುಳಿಗೆ ಸಿಕ್ಕು ನಲುಗುವ ಅಪರೂಪದ ಕಥೆ ಇದಾಗಿದೆ. ವಿಜಯ್ಗೆ ಜೋಡಿಯಾಗಿ ಮಾತಂಗಿ ಪ್ರಸನ್ನ ನಟಿಸಿದ್ದಾರೆ.ಸುರೇಶ್ ಆರ್ಮುಗಂ ಸಂಕಲನ, ವಾಸು ದೀಕ್ಷಿತ್ ಸಂಗೀತ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿಯವರ ಹಿನ್ನೆಲೆ ಸಂಗೀತ ಮತ್ತು ಅದ್ವೈತ್ ಗುರುಮೂರ್ತಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ನಾಗರಾಜ್ ಸೋಮಯಾಜಿ ಚಿತ್ರದ ನಿರ್ಮಾಪಕರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.