ಬೆಂಗಳೂರು: ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರ ‘ಪಿಆರ್‌ಕೆ’ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ ‘ಫ್ಯಾಮಿಲಿ ಪ್ಯಾಕ್' ಸಿನಿಮಾದ ಟ್ರೇಲರ್ ಗುರುವಾರ ಬಿಡುಗಡೆಯಾಗಿದೆ.

ಲಿಖಿತ್ ಶೆಟ್ಟಿ, ಅಮೃತಾ ಅಯ್ಯಂಗಾರ್ ಮತ್ತು ರಂಗಾಯಣ ರಘು ಮುಖ್ಯ ಭೂಮಿಕೆ ಕಾಣಿಸಿಕೊಂಡಿರುವ ಈ ಸಿನಿಮಾ ಫೆ.17ರಂದು ಅಮೇಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆಯಾಗುತ್ತಿದೆ.

ಲಿಖಿತ್ ಶೆಟ್ಟಿ ಅವರೇ ಚಿತ್ರದ ನಾಯಕ. ಅವರಿಗೆ ಅಮೃತಾ ಅಯ್ಯಂಗಾರ್ ಜೋಡಿ. ಪಕ್ಕಾ ಕಾಮಿಡಿ ಚಿತ್ರ ಎಂಬುದನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಟ್ರೇಲರ್ನಲ್ಲಿ ಅಮಾನುಷ ಶಕ್ತಿ ವಿಚಾರವನ್ನೂ ಪ್ರಸ್ತಾಪಿಸಲಾಗಿದೆ. ಇದನ್ನು ಸಿನಿಮಾದಲ್ಲಿ ಹೇಗೆ ತೋರಿಸಲಾಗಿದೆ ಎಂಬ ಕುತೂಹಲ ಮೂಡಿಸಿದೆ.

ಸಾಧು ಕೋಕಿಲ, ರಂಗಾಯಣ ರಘು, ದತ್ತಣ್ಣ, ಅಚ್ಯುತ್ ಕುಮಾರ್, ನಾಗಭೂಷಣ್, ತಿಲಕ್, ಅಶ್ವಿನಿ ಗೌಡ ತಾರಾಗಣದಲ್ಲಿದ್ದಾರೆ.

ಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ಎಸ್.ಅರ್ಜುನ್ ಕುಮಾರ್, ‘ಫ್ಯಾಮಿಲಿ ಪ್ಯಾಕ್‌ನಂತಹ ಕಥೆಯನ್ನು ಸಿನಿಮಾ ಮಾಡಿ ಪ್ರೈಮ್ ವಿಡಿಯೊಗೆ ತರಲು ನನಗೆ ಸಂತೋಷವಿದೆ. ಯಾವುದೇ ದ್ವಂದ್ವಾರ್ಥದ ಸಂಭಾಷಣೆ ಇಲ್ಲದೆ ಪ್ರೇಕ್ಷಕರಿಗೆ ಕಾಮಿಡಿ ಉಣಬಡಿಸುವುದೇ ಸಿನಿಮಾದ ಮೂಲ ಉದ್ದೇಶ. ಸಿನಿಮಾದಲ್ಲಿ ಕಾಮಿಡಿ ಜತೆ ಹಲವು ವಿಚಾರಗಳನ್ನು ಹೇಳಲಾಗಿದೆ. ಎಲ್ಲರೂ ಅದ್ಭುತವಾಗಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆಗಾಗಿ ಕಾಯುತ್ತಿದ್ದೇವೆ’ ಎಂದಿದ್ದಾರೆ.

‘ಪಿಆರ್‌ಕೆ’ ಪ್ರೊಡಕ್ಷನ್ ಅಡಿಯಲ್ಲಿ ‘ಕವಲುದಾರಿ’, ‘ಮಾಯಾಬಜಾರ್’, ‘ಫ್ರೆಂಚ್ ಬಿರಿಯಾನಿ’ ಹಾಗೂ ‘ಒನ್ ಕಟ್ ಟೂ ಕಟ್’ ಸಿನಿಮಾಗಳು ಮೂಡಿಬಂದಿವೆ.

ಓದಿ... Promise Day 2022: ಪ್ರೇಮಿಗಳ ಪಾಲಿಗೆ ‘ಪ್ರಾಮಿಸ್ ಡೇ’ ಯಾಕಿಷ್ಟು ಮಹತ್ವ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.