ಮುಂಬೈ: ತಮ್ಮ ಚೊಚ್ಚಲ ನಿರ್ದೇಶನದ ‘ರಾಕೆಟ್ರಿ: ದಿ ನಂಬಿ ಎಫೆಕ್ಟ್’ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡ ಬೆನ್ನಲ್ಲೇ ನಟ ಆರ್. ಮಾಧವನ್ ಅವರು ಇದೀಗ ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಗೆ (ಎಫ್ಟಿಐಐ) ನೂತನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಅನುರಾಗ್ ಠಾಕೂರ್, ಮಾಧವನ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.

‘ಎಫ್ಟಿಐಐನ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಮುಖ್ಯಸ್ಥರಾಗಿ ನಾಮನಿರ್ದೇಶಗೊಂಡಿರುವ ಆರ್. ಮಾಧವನ್ ಅವರಿಗೆ ಹೃದಯಪೂರ್ವಕ ಅಭಿನಂದನೆ ತಿಳಿಸುತ್ತೇನೆ. ನಿಮ್ಮ ಅಪಾರ ಅನುಭವ ಸಂಸ್ಥೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವುದಲ್ಲದೇ ಸಂಸ್ಥೆಯಲ್ಲಿ ಧನಾತ್ಮಕ ಬದಲಾವಣೆ ತರುತ್ತದೆ ಎಂಬ ನಂಬಿಕೆಯಿದೆ’ ಎಂದು ಹೇಳಿದ್ದಾರೆ.

ಅನುರಾಗ್ ಠಾಕೂರ್ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿರುವ ಮಾಧವನ್, ಧನ್ಯವಾದ ತಿಳಿಸಿದ್ದಾರೆ.

ಎಫ್ಟಿಐಐ ಹಿಂದಿನ ಅಧ್ಯಕ್ಷ ಶೇಖರ್ ಕಪೂರ್ ಅವರ ಆಡಳಿತಾವಧಿ ಮಾರ್ಚ್ 3ರಂದು ಕೊನೆಗೊಂಡಿತ್ತು. ಆ ಸ್ಥಾನಕ್ಕೆ ಮಾಧವನ್ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.