ರಾಘವೇಂದ್ರ ರಾಜ್‌ಕುಮಾರ್, ಶ್ರುತಿ ಜೋಡಿಯಾಗಿ ನಟಿಸಿರುವ ‘13’ ಚಿತ್ರ ತೆರೆಗೆ ಬರಲಿದೆ ಸಿದ್ಧವಾಗಿದೆ. ರಾಘವೇಂದ್ರ ರಾಜ್‌ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಇತ್ತೀಚೆಗಷ್ಟೇ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆಗೊಳಿಸಿದೆ. ಪಲ್ಲಕ್ಕಿ ಖ್ಯಾತಿಯ ಕೆ.ನರೇಂದ್ರಬಾಬು ಅವರ ನಿರ್ದೇಶನದ ಚಿತ್ರವನ್ನು ಯುವಿ ಪ್ರೊಡಕ್ಷನ್ ನಿರ್ಮಾಣ ಮಾಡಿದೆ.

‘ರಾಘವೇಂದ್ರ ರಾಜ್‌ಕುಮಾರ್ ನಿವೃತ್ತ ಸೈನಿಕನಾಗಿ ಕಾಣಿಸಿಕೊಂಡಿದ್ದಾರೆ. ನಿವೃತ್ತಿ ಬಳಿಕ ಇವರು ಗುಜರಿ ಅಂಗಡಿ ಮಾಲೀಕ ಮೋಹನ್ ಕುಮಾರ್ ಆಗಿರುತ್ತಾರೆ. ಟೀ ಅಂಗಡಿ ನಡೆಸುವ ಸಾಯಿರಾಬಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರದಲ್ಲಿ ಶ್ರುತಿ ಅವರು ನಟಿಸಿದ್ದಾರೆ’ ಎನ್ನುತ್ತಾರೆ ನಿರ್ದೇಶಕ ಕೆ.ನರೇಂದ್ರಬಾಬು.

‘ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟಪಡುತ್ತಾರೆ ಎಂಬುದನ್ನು ಥ್ರಿಲ್ಲರ್ ಕಥೆಯ ಮೂಲಕ ಹೇಳುವ ಚಿತ್ರ ಇದಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಒಂದು ನೈಜ ಘಟನೆ ಈ ಕಥೆಗೆ ಸ್ಫೂರ್ತಿ. ಪ್ರಮೋದ್ ಶೆಟ್ಟಿ ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರ ನಿರ್ವಹಿಸಿದ್ದಾರೆ’ ಎಂದು ನಿರ್ದೇಶಕರು ತಿಳಿಸಿದರು.

ಮಂಜುನಾಥ್ ನಾಯ್ಡು ಅವರ ಛಾಯಾಗ್ರಹಣ ಹಾಗೂ ಸೋಹನ್ ಬಾಬು ಅವರ ಸಂಗೀತ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.