ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸಿರುವ ‘ಶೀಲ’ ಚಿತ್ರ ಜುಲೈ 28ಕ್ಕೆ ತೆರೆಗೆ ಬರಲಿದೆ. ಮಲಯಾಳಂ ಹಾಗೂ ಕನ್ನಡದಲ್ಲಿ ನಿರ್ಮಾಣವಾಗಿರುವ ಚಿತ್ರಕ್ಕೆ ಬಾಲು ನಾರಾಯಣನ್ ಆ್ಯಕ್ಷನ್–ಕಟ್ ಹೇಳಿದ್ದಾರೆ. ಉದ್ಯಮಿ ಡಿ.ಎಂ.ಪಿಳ್ಳೈ ಬಂಡವಾಳ ಹೂಡಿದ್ದಾರೆ.

‘ಇದೊಂದು ಮಹಿಳಾ ಪ್ರಧಾನ ಚಿತ್ರ. ಪ್ರಸ್ತುತ ಹೆಣ್ಣುಮಕ್ಕಳು ದಿನನಿತ್ಯ ಸಮಾಜದಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳ ಸುತ್ತ ಕಥೆ ಸಾಗುತ್ತದೆ. ಹೆಣ್ಣು ಮನಸ್ಸು ಮಾಡಿದರೆ, ತನ್ನಗೆದುರಾಗುವ ಸಮಸ್ಯೆಯನ್ನು ತಾನೇ ಹೇಗೆ ಬಗೆಹರಿಸಿಕೊಳ್ಳಬಹುದು ಎಂಬುದನ್ನು ಕೂಡ ಈ ಚಿತ್ರದಲ್ಲಿ ತೋರಿಸಿದ್ದೇವೆ. ಹೆಣ್ಣು ಲಕ್ಷ್ಮೀ ಸ್ವರೂಪಿಯೂ ಹೌದು. ಕಾಳಿ ಸ್ವರೂಪಿ ಕೂಡ ಎಂಬುದು ಚಿತ್ರ ನೋಡಿದಾಗ ತಿಳಿಯುತ್ತದೆ’ ಎಂದು ರಾಗಿಣಿ ದ್ವಿವೇದಿ ಹೇಳಿದರು.
ಕೇರಳ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿದೆ. ಅವಿನಾಶ್, ಶೋಭ್ ರಾಜ್, ಚಿತ್ರಾ ಶೆಣೈ ಮುಂತಾದವರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.