ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ ಕೂಲಿ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಹಿಂದೆ ‘ಜೈಲರ್’ ಸಿನಿಮಾದ ಮೂಲಕ ದೊಡ್ಡ ಮಟ್ಟದ ಗೆಲುವು ಕಂಡಿದ್ದ ಅವರು ಮತ್ತೆ ಕೂಲಿಯಾಗಿ ತೆರೆ ಮೇಲೆ ಬರುತ್ತಿದ್ದಾರೆ. ಸೋಮವಾರ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಲಕ್ಷಾಂತರ ವೀಕ್ಷಣೆ ಕಂಡಿದೆ.

ಟೀಸರ್ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಚೆನ್ನಾಗಿದೆ ಎಂದು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಮತ್ತೆ ಕೆಲವರು ಕೂಲಿ ಟೈಟಲ್ ಹಳೆಯದು, ಹೊಸ ಆಕರ್ಷಕ ಹೆಸರನ್ನು ಇಡಬಹುದಿತ್ತು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಬರೆದುಕೊಂಡಿದ್ದಾರೆ.

ಕೂಲಿ ಸಿನಿಮಾದ ಟೈಟಲ್ ಟೀಸರ್ ಫೈಟ್‌ನಿಂದ ಆರಂಭವಾಗುತ್ತದೆ. ಈ ಫೈಟ್‌ನಲ್ಲಿ ರಜನಿಕಾಂತ್ ಲುಕ್, ಮಾಸ್ ಡೈಲಾಗ್ ಹಾಗೂ ಅವರ ಫೈಟಿಂಗ್ ದೃಶ್ಯಗಳು ಅಭಿಮಾನಿಗಳಿಗೆ ಇಷ್ಟವಾಗಿವೆ.

ಗೋಲ್ಡ್ ಸ್ಮಗ್ಲಿಂಗ್ ಬಗ್ಗೆ ‘ಕೂಲಿ’ ಸಿನಿಮಾದ ಕಥೆ ಇದೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.