ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾ 2024ರ ಜ.26ರಂದು ಬಿಡುಗಡೆಗೊಳ್ಳಲಿದೆ.

ಚಿತ್ರದ ಟೀಸರ್ ಬಿಡುಗಡೆ ಮಾಡಿರುವ ಪರಂವಃ ಸ್ಟುಡಿಯೋಸ್ ರಿಲೀಸ್ ದಿನಾಂಕವನ್ನು ಪ್ರಕಟಿಸಿದೆ. ‘ಈ ಸಲ ಪಾರ್ಟಿ ಜೋರು!’ ಎನ್ನುವ ಮೂಲಕ ಮನರಂಜನೆಯ ರಸದೌತಣದ ಮುನ್ಸೂಚನೆಯನ್ನು ಚಿತ್ರತಂಡ ನೀಡಿದೆ. ರಕ್ಷಿತ್ ಶೆಟ್ಟಿ ನಟನೆಯ ಹಿಟ್ ಸಿನಿಮಾ ‘ಕಿರಿಕ್ ಪಾರ್ಟಿ’ಯ ಬರಹಗಾರರಲ್ಲಿ ಅಭಿಜಿತ್ ಮಹೇಶ್ ಒಬ್ಬರಾಗಿದ್ದರು. ಇದೀಗ ಸ್ವತಂತ್ರ ನಿರ್ದೇಶಕನಾಗಿ ಅಭಿಜಿತ್ ಬೆಳ್ಳಿಪರದೆಗೆ ಹೆಜ್ಜೆ ಇಡುತ್ತಿದ್ದಾರೆ. ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಅಭಿಜಿತ್ ಕಾರ್ಯನಿರ್ವಹಿಸಿದ್ದಾರೆ.

ಕಾಮಿಡಿ ಜಾನರ್ನ ಈ ಸಿನಿಮಾದಲ್ಲಿ ಅಚ್ಯುತ್ ಕುಮಾರ್, ದಿಗಂತ್ ಹಾಗೂ ಲೂಸ್ ಮಾದ ಯೋಗಿ ಹಾಗೂ ಸಿರಿ ರವಿಕುಮಾರ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸಬೇಕಿತ್ತು. ಆದರೆ ‘ಕಾಂತಾರ’ದ ಯಶಸ್ಸಿನ ಬೆನ್ನಲ್ಲೇ ಅದರ ಎರಡನೇ ಭಾಗದ ಸಿದ್ಧತೆಗೆ ರಿಷಬ್ ಇಳಿದ ಕಾರಣ, ಅವರು ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಿಂದ ಹೊರಗುಳಿದಿದ್ದರು. ಅವರ ಸ್ಥಾನಕ್ಕೆ ಲೂಸ್ ಮಾದ ಯೋಗಿ ಬಂದಿದ್ದಾರೆ. ಸಿನಿಮಾ ಬ್ಯಾಂಕಾಕ್ನಲ್ಲಿ ಚಿತ್ರೀಕರಣಗೊಂಡಿದೆ. ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಚಿತ್ರಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.