ಬೆಂಗಳೂರು: ಚಂದನವನದ ಮೋಹಕ ತಾರೆ ರಮ್ಯಾ (ದಿವ್ಯಾ ಸ್ಪಂದನ) ಅವರಿಗೆ ಇಂದು (ನ.29) 37ನೇ ಜನ್ಮ ದಿನದ ಸಂಭ್ರಮ.

ಸೋಷಿಯಲ್ ಮೀಡಿಯಾಗಳಿಂದದೂರವಾಗಿರುವ ರಮ್ಯಾಗೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳನ್ನು ಕೋರುತ್ತಿದ್ದಾರೆ.

ಕನ್ನಡ ಸೇರಿದಂತೆ ತಮಿಳು, ತೆಲುಗಿನಲ್ಲೂ ನಟಿಸಿರುವ ರಮ್ಯಾ ದಕ್ಷಿಣಭಾರತದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಸಿನಿಮಾ ಮಾತ್ರವಲ್ಲದೆ, ರಾಜಕಾರಣದಲ್ಲೂ ರಮ್ಯಾ ಸಕ್ರಿಯರಾಗಿದ್ದಾರೆ. ಪ್ರಧಾನಿ ಮೋದಿ ಅವರನ್ನು ಟೀಕಿಸುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ರಮ್ಯಾ ಸುದ್ದಿಯಾಗುತ್ತಿದ್ದಾರೆ.

ರಮ್ಯಾ 2003ರಲ್ಲಿನಟ ಪುನೀತ್ ರಾಜ್ಕುಮಾರ್ ನಟನೆಯ ‘ಅಭಿ’ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶ ಮಾಡಿದರು. ಸದ್ಯ ಕನ್ನಡ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ರಮ್ಯಾ 2016ರಲ್ಲಿ ಬಿಡುಗಡೆಯಾಗಿದ್ದ ನಾಗರಹಾವು ಸಿನಿಮಾದಲ್ಲಿ ನಟಿಸಿದ್ದರು. ಬಳಿಕ ಯಾವುದೇ ಸಿನಿಮಾಗಳಲ್ಲಿ ನಟಿಸಿಲ್ಲ.

ಪೋರ್ಚುಗಲ್ ದೇಶದ ತಮ್ಮ ಬಹುಕಾಲದ ಗೆಳೆಯ, ಉದ್ಯಮಿ ರಾಫೆಲ್ ಜೊತೆ ಸದ್ಯ ದುಬೈನಲ್ಲಿ ನೆಲೆಸಿದ್ದಾರೆ ಎನ್ನಲಾಗಿದೆ.2013ರಲ್ಲಿ ಮಂಡ್ಯ ಲೋಕಸಭೆಯ ಉಪ ಚುನಾವಣೆ ಮೂಲಕ ರಮ್ಯಾ ರಾಜಕೀಯ ಪ್ರವೇಶಿಸಿದ್ದರು. ಚುನಾವಣೆಯಲ್ಲಿ ಗೆದ್ದು ಸಂಸತ್ ಪ್ರವೇಶಿಸಿದ್ದ ಅವರು ಮರುವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಸೋಲುಂಡಿದ್ದರು. ಬಳಿಕ ಕಾಂಗ್ರೆಸ್ ಪಕ್ಷದಲ್ಲಿ ಅವರು ಸೋಷಿಯಲ್ ಮೀಡಿಯಾದ ಉಸ್ತುವಾರಿ ಹೊತ್ತಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.