ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ರಂಗ ಸಮುದ್ರ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟ ರಾಘವೇಂದ್ರ ರಾಜಕುಮಾರ್ ಚಿತ್ರದ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ರಾಜಕುಮಾರ್ ಅಸ್ಕಿ ನಿರ್ದೇಶನದ ಚಿತ್ರಕ್ಕೆ ಹೊಯ್ಸಳ ಕೊಣನೂರು ಬಂಡವಾಳ ಹೂಡಿದ್ದಾರೆ. ‘ಜನಪದ ಸೊಗಡಿನ ಈ ಸಿನಿಮಾ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣಗೊಂಡಿದೆ. ಪುನೀತ್ ರಾಜಕುಮಾರ್ ಅವರು ಈ ಚಿತ್ರದಲ್ಲಿ ನಟಿಸಬೇಕಿತ್ತು, ಆದರೆ ಆಗಲಿಲ್ಲ. ಈಗ ಅದೇ ಮನೆಯ ರಾಘವೇಂದ್ರ ರಾಜಕುಮಾರ್ ಅವರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಜ.19ರಂದು ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ರಂಗಾಯಣ ರಘು.

‘‘ರಂಗ ಸಮುದ್ರ’ ಊರಿನ ಹೆಸರು. ಈ ಚಿತ್ರವನ್ನು ಮೊದಲು ನೋಡಿದವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್. ಚಿತ್ರವನ್ನು ನೋಡಿ, ಅವರು ಜಿಲ್ಲಾಧಿಕಾರಿ ಪಾತ್ರದಲ್ಲಿ(ಅತಿಥಿ ಪಾತ್ರದಲ್ಲಿ) ನಟಿಸುವುದಾಗಿ ಹೇಳಿದ್ದರು. ಆದರೆ ವಿಧಿಯಾಟದಿಂದ ಅದು ಆಗಲಿಲ್ಲ’ ಎಂದು ನಿರ್ದೇಶಕ ರಾಜಕುಮಾರ್ ಅಸ್ಕಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.