ಬಾಲಿವುಡ್ ಹಾಗೂ ದಕ್ಷಿಣ ಭಾರತದ ಚಿತ್ರಗಳಹಾಡುಗಳನ್ನು ತುಲನೆ ಮಾಡಿರುವ ನಟಿ ರಶ್ಮಿಕಾ ಮಂದಣ್ಣ ಮತ್ತೊಮ್ಮೆ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ಈ ಕುರಿತು 'ಹಿಂದೂಸ್ತಾನ್ ಟೈಮ್ಸ್' ವರದಿ ಮಾಡಿದೆ. ಮಿಷನ್ ಮಜ್ನು ಚಿತ್ರದ ಹಾಡು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿರುವ ರಶ್ಮಿಕಾ, ಬಾಲಿವುಡ್ನ ರೊಮ್ಯಾಂಟಿಕ್ ಹಾಡುಗಳು ಅತ್ಯುತ್ತಮವಾಗಿದ್ದು, ದಕ್ಷಿಣ ಭಾರತದಲ್ಲಿ ಮಸಾಲಾ, ಐಟಂ ಹಾಡುಗಳು ಜಾಸ್ತಿಯಿವೆ ಎಂದು ಹೇಳಿದ್ದಾರೆ.

ಇದು ಬಾಲಿವುಡ್ನಲ್ಲಿ ನನ್ನ ಮೊದಲ ರೊಮ್ಯಾಂಟಿಕ್ ಹಾಡು ಆಗಿದೆ. ಈ ಬಗ್ಗೆ ಅತೀವ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ಆದರೆ ಮಂದಣ್ಣ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಕುರಿತು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ಕಾರಣಕ್ಕೆ ಕನ್ನಡಿಗರು ಆಕೆಯನ್ನು ಇಷ್ಟಪಡುತ್ತಿಲ್ಲ. ಸರಿಯಾಗಿ ಯೋಚನೆ ಮಾಡದೇ ಪ್ರತಿಕ್ರಿಯಿಸುತ್ತಾರೆ ಎಂದು ನೆಟ್ಟಿಗರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.