ರಾಜ್ಯದಲ್ಲಿ ಬಿಡುಗಡೆಯಾಗಿ 3 ವಾರದ ಬಳಿಕವೂ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕಾಂತಾರ, ಅ.14ರಿಂದ ಹಿಂದಿಯಲ್ಲೂ ತೆರೆಗೆ ಬರಲಿದೆ. ಚಿತ್ರವನ್ನು ಹಿಂದಿಗೆ ಡಬ್ ಮಾಡಲಾಗಿದ್ದು, ಟ್ರೇಲರ್ ಈಗಾಗಲೇ ಬಿಡುಗಡೆಗೊಂಡಿದೆ. ಹಿಂದಿ ಭಾಷೆಯೊಂದರಲ್ಲೇ 2500 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಚಿತ್ರ ಪ್ರದರ್ಶನ ಕಾಣಲಿದೆ ಎಂದು ಹೊಂಬಾಳೆ ಫಿಲಂಸ್ ಹೇಳಿದೆ.

ಹಿಂದಿ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳ ಸೇರಿದಂತೆ ಭಾರತದ ಇತರ ಭಾಷೆಗಳಿಗೂ ಕಾಂತಾರ ಡಬ್ ಆಗಿದ್ದು, ಇದೇ ವಾರದಲ್ಲಿ ಚಿತ್ರ ತೆರೆ ಕಾಣಲಿದೆ. ಪ್ರೇಕ್ಷರಿಂದ ಅತ್ಯಂತ ಪ್ರಶಂಸೆ ಪಡೆಯುತ್ತಿರುವ ಚಿತ್ರ ಕೆಜಿಎಫ್–2 ನಂತರ ಅತ್ಯುತ್ತಮ ಗಳಿಕೆ ಕಾಣುತ್ತಿದೆ.

ಇದನ್ನೂ ಓದಿ:ಕಾಂತಾರದ ಹಾಡುಗಳಿಗೆ ನೆಟ್ಟಿಗರಿಂದ ಟ್ರೋಲ್!

ಮುಂಬೈ, ಚೆನ್ನೈ ಸೇರಿದಂತೆ ದೇಶದ ಹಲವು ಪ್ರಮುಖ ನಗರಗಳಲ್ಲಿ ಈಗಾಗಲೇ ಕನ್ನಡದಲ್ಲಿ ಚಿತ್ರ ಬಿಡುಗಡೆ ಮಾಡಲಾಗಿದ್ದು, ಅತ್ಯುತ್ತಮ ಪ್ರತಿಕ್ರಿಯೆ ಪಡೆದಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಚಿತ್ರ ತುಳುನಾಡಿನ ಭೂತಕೋಲಾ ಸೇರಿದಂತೆ ಹಲವು ಆಚರಣೆಗಳತ್ತ ಗಮನಹರಿಸಿರುವ ಚಿತ್ರ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.