ಬೆಂಗಳೂರು: ಮಲಯಾಳ ಸಿನಿಮಾರಂಗದ ಖ್ಯಾತ ನಟ ಮೋಹನ್ಲಾಲ್ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಬುಧವಾರ(ಏ.17) ಭೇಟಿ ನೀಡಿ ದೇವರ ದರ್ಶನ ಪಡೆದಿದ್ದು, ಇದೇ ಸಂದರ್ಭದಲ್ಲಿ ಮೋಹನ್ಲಾಲ್ ಅವರನ್ನು ನಟ ರಿಷಬ್ ಶೆಟ್ಟಿ ದಂಪತಿ ಭೇಟಿಯಾಗಿದ್ದಾರೆ.

ರಿಷಬ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿರುವ ‘ಕಾಂತಾರ–ಒಂದು ದಂತಕಥೆ’ಯ ಮೊದಲ ಅಧ್ಯಾಯದ ಚಿತ್ರೀಕರಣಕ್ಕೆ ಚಿತ್ರತಂಡ ಸಜ್ಜಾಗಿದೆ. ಕಾಂತಾರ ಚಿತ್ರದ ಪ್ರೀಕ್ವೆಲ್ ಚಿತ್ರೀಕರಣಕ್ಕಾಗಿ ರಿಷಬ್ ಊರಾದ ಕೆರಾಡಿಯಲ್ಲಿ ಬೃಹತ್ ಸೆಟ್ಗಳನ್ನು ನಿರ್ಮಿಸಲಾಗಿದೆ. ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಹೊತ್ತ ಈ ಚಿತ್ರದ ಶೂಟಿಂಗ್ ಕೊಡಚಾದ್ರಿ ಬೆಟ್ಟದ ಸುತ್ತಮುತ್ತಲೂ ನಡೆಯಲಿದೆ. ಹೀಗಾಗಿ ರಿಷಬ್ ತಮ್ಮ ಊರಿನಲ್ಲೇ ಬೀಡುಬಿಟ್ಟಿದ್ದಾರೆ. ಕೊಲ್ಲೂರು ದೇವಸ್ಥಾನ ಕೆರಾಡಿಗೆ ಸಮೀಪದಲ್ಲೇ ಇದ್ದು, ಇದೇ ಸಂದರ್ಭದಲ್ಲಿ ಮೋಹನ್ಲಾಲ್ ಅವರನ್ನು ಭೇಟಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.