ಬೆಂಗಳೂರು: ಹುಬ್ಬಳ್ಳಿಯ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಘಟನೆಯನ್ನು ನಟ ರಿಷಬ್ ಶೆಟ್ಟಿ ಮತ್ತು ನಟಿ ರಚಿತಾ ರಾಮ್ ಖಂಡಿಸಿದ್ದಾರೆ.

‘ರಾಜಕೀಯ ಆಯಾಮದಲ್ಲಿ ಈ ವಿಷಯವನ್ನು ತರಬೇಡಿ. ಆಗಿರೋದು ಅನ್ಯಾಯ. ಈಗ ನ್ಯಾಯ ಬೇಕಾಗಿದೆ ಅಷ್ಟೇ. ಈ ರೀತಿಯ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಅವರನ್ನು ಜನಸಾಮಾನ್ಯರ ಕೈಗೆ ಒಪ್ಪಿಸಿ’ ಎಂದು ಇನ್‌ಸ್ಟಾಗ್ರಾಂನಲ್ಲಿ ರಚಿತಾ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ತಮ್ಮ ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ‘ನೇಹಾ ಹಿರೇಮಠ ಅವರ ಕೊಲೆ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ. #JusticeForNeha’ ಎಂದು ಉಲ್ಲೇಖಿಸಿದ್ದಾರೆ.
.Murder: ನೇಹಾ ಕೊಲೆ ಪ್ರಕರಣ; ವಿದ್ಯಾರ್ಥಿನಿ ಹತ್ಯೆ ಹೀನ ಕೃತ್ಯ– ನಟ ಧ್ರುವ ಸರ್ಜಾ.ನೇಹಾ ಕೊಲೆ ಪ್ರಕರಣ: ಆರೋಪಿಯನ್ನು ಎನ್ಕೌಂಟರ್ ಮಾಡಿ, ಮನೆ ನೆಲಸಮ ಮಾಡಿ– ಮುತಾಲಿಕ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.