ಭಾರತದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ(IFFI–ಇಫಿ) 54ನೇ ಆವೃತ್ತಿಯಲ್ಲಿ ‘ಕಾಂತಾರ’ ಚಿತ್ರಕ್ಕಾಗಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ‘ತೀರ್ಪುಗಾರರ ವಿಶೇಷ ಪ್ರಶಸ್ತಿ’(ರಜತ ಮಯೂರ) ದೊರೆತಿದೆ.

ಗೋವಾದ ಪಣಜಿಯಲ್ಲಿ ಮಂಗಳವಾರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಈ ಪ್ರಶಸ್ತಿಗೆ ಭಾಜನವಾಗಿದೆ. ಈ ಬಾರಿ ಅಂತರರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ 15 ಚಿತ್ರಗಳು ಕಣದಲ್ಲಿದ್ದವು. ಈ ಪೈಕಿ ಭಾರತದಿಂದ ‘ಕಾಂತಾರ’ ಸೇರಿದಂತೆ ಒಟ್ಟು ಮೂರು ಚಿತ್ರಗಳು ಸ್ಪರ್ಧೆಯಲ್ಲಿದ್ದವು. ಈ ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಮತ್ತು ₹15 ಲಕ್ಷ ನಗದು ಒಳಗೊಂಡಿದೆ.

ಶಂಕರ್‌ನಾಗ್ ಅವರಿಗೆ ಅರ್ಪಣೆ: ‘‘ಸ್ಪೆಷಲ್ ಜ್ಯೂರಿ ಅವಾರ್ಡ್’ ದೊರಕಿದ್ದು, ಎಂದೂ ಮರೆಯಲಾಗದ ಕ್ಷಣ. 1979ರಲ್ಲಿ ನನ್ನ ಸ್ಫೂರ್ತಿಯಾದ ಶಂಕರ್‌ನಾಗ್ ಅವರಿಗೆ ‘ಒಂದಾನೊಂದು ಕಾಲದಲ್ಲಿ’ ಚಿತ್ರಕ್ಕೆ ಅತ್ಯುತ್ತಮ ನಟ ಎಂಬ ಪ್ರಶಸ್ತಿ ಇದೇ ಚಿತ್ರೋತ್ಸವದಲ್ಲಿ ದೊರಕಿತ್ತು. ಅವರು ತೋರಿಸಿರುವ ದಾರಿಯಲ್ಲಿ ನಡೆಯಲು ಪ್ರಯತ್ನಿಸುತ್ತಿರುವ ನನಗೆ ಇಂದು ಈ ಪ್ರಶಸ್ತಿ ದೊರೆತಿರುವುದು ಸಂತಸ ನೀಡಿದೆ. ಜನರ ಪ್ರಶಂಸೆ ಮತ್ತು ಬೆಂಬಲ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ಮತ್ತೊಮ್ಮೆ ಉತ್ತಮವಾದ ಚಿತ್ರವನ್ನು ನೀಡಲು ಶ್ರಮಿಸುತ್ತೇನೆ. ಈ ನನ್ನ ಎಲ್ಲ ಪ್ರಯತ್ನ ಹಾಗೂ ಯಶಸ್ಸಿಗೆ ಕಾರಣರಾದ ಪ್ರೀತಿಯ ಕನ್ನಡಿಗರಿಗೆ ನಾನು ಸದಾ ಆಭಾರಿ. ಈ ಪ್ರಶಸ್ತಿಯನ್ನು ನಾನು ಶಂಕರ್‌ನಾಗ್ ಅವರಿಗೆ ಅರ್ಪಿಸುತ್ತಿದ್ದೇನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.