‘ಆಪರೇಷನ್ ಅಲಮೇಲಮ್ಮ’ ಚಿತ್ರದ ಮುಖಾಂತರ ಸ್ಯಾಂಡಲ್ವುಡ್ಗೆ ಹೆಜ್ಜೆ ಇಟ್ಟಿದ್ದ ನಟ ರಿಷಿ ಅವರಿಗೆ ಆ್ಯಕ್ಷನ್ ಕಟ್ ಹೇಳಲು ಪ್ರಶಾಂತ್ ರಾಜಪ್ಪ ಸಜ್ಜಾಗಿದ್ದಾರೆ.

ಮೊದಲ ಚಿತ್ರದ ಬಳಿಕ ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದ್ದ ಹೇಮಂತ್ ರಾವ್ ನಿರ್ದೇಶನದ ‘ಕವಲುದಾರಿ’ ಚಿತ್ರದಲ್ಲಿ ಮಿಂಚಿದ್ದ ರಿಷಿ ಇತ್ತೀಚೆಗಷ್ಟೇ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’ ಎಂಬ ಸಿನಿಮಾದಲ್ಲಿ ನಟಿಸಿದ್ದರು. ಇದರ ಬಳಿಕ ಮತ್ತೊಂದು ಪ್ರಾಜೆಕ್ಟ್ಗೆ ರಿಷಿ ಹಸಿರು ನಿಶಾನೆ ನೀಡಿದ್ದಾರೆ. ಚಂದನವನದಲ್ಲಿ ಸಂಭಾಷಣೆಕಾರರಾಗಿ ಗುರುತಿಸಿಕೊಂಡಿರುವ ಪ್ರಶಾಂತ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆಯಲಿದ್ದಾರೆ.

‘ವಿಕ್ಟರಿ’, ‘ಅಧ್ಯಕ್ಷ’, ‘ರನ್ನ’, ‘ಪೊಗರು’, ‘ಹೊಂದಿಸಿ ಬರೆಯಿರಿ’ ಸೇರಿದಂತೆ 25ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆ ಬರೆದಿದ್ದಾರೆ ಪ್ರಶಾಂತ್ ರಾಜಪ್ಪ. ಖ್ಯಾತ ನಿರ್ದೇಶಕರ ಜೊತೆ ಸಹನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ಇವರಿಗಿದ್ದು, ಈ ಅನುಭವದಲ್ಲೇ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆಯೂ ಇವರದ್ದೇ.

ಹಾಸ್ಯ ಮಿಶ್ರಿತ ಭಾವನಾತ್ಮಕ ಸಿನಿಮಾ ಇದಾಗಿದ್ದು, ಸಿನಿಮಾದ ಪ್ರಿಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಡಿಸೆಂಬರ್ನಲ್ಲಿ ಸಿನಿಮಾ ಸೆಟ್ಟೇರಲಿದ್ದು, ಜನವರಿಯಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸದ್ಯದಲ್ಲೇ ಸಿನಿಮಾದ ಶೀರ್ಷಿಕೆ, ತಾರಾಬಳಗ ಎಲ್ಲವನ್ನೂ ತಿಳಿಸುತ್ತೇನೆ ಎಂದಿದ್ದಾರೆ ಪ್ರಶಾಂತ್ ರಾಜಪ್ಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.