‘ಆಪರೇಷನ್ ಅಲಮೇಲಮ್ಮ’ ಖ್ಯಾತಿಯ ನಟ ರಿಷಿ ನಟಿಸಿರುವ ‘ರುದ್ರ ಗರುಡ ಪುರಾಣ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದ್ದು, ಚಿತ್ರದ ‘ಕಣ್ಮುಂದೆ ಬಂದು..’ ಎಂಬ ಹಾಡು ಬಿಡುಗಡೆಯಾಗಿದೆ. ಸಿನಿಮಾ ಡಿ.27ರಂದು ತೆರೆಗೆ ಬರುತ್ತಿದೆ.

‘ಚಿತ್ರದ ನಿರ್ದೇಶಕ ನಂದೀಶ್ ಉತ್ತಮವಾದ ಕಥೆ ಬರೆದಿದ್ದಾರೆ. ಈ ಕಥೆಯನ್ನು ತೆರೆಯ ಮೇಲೆ ಯಾವುದೇ ಕೊರತೆ ಇಲ್ಲದ ಹಾಗೆ ತರಲು ನಿರ್ಮಾಪಕ ಲೋಹಿತ್ ಸಹಕಾರ ನೀಡಿದ್ದಾರೆ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಪೊಲೀಸ್ ಅಧಿಕಾರಿ ಪಾತ್ರಕ್ಕೆ ಬಣ್ಣಹಚ್ಚಿದ್ದೇನೆ’ ಎಂದರು ನಟ ರಿಷಿ. ರಿಷಿಗೆ ಜೋಡಿಯಾಗಿ ಪ್ರಿಯಾಂಕ ಕುಮಾರ್ ನಟಿಸಿದ್ದಾರೆ.

ಖ್ಯಾತ ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಬಳಿ ಕಾರ್ಯನಿರ್ವಹಿಸಿರುವ ಕೃಷ್ಣಪ್ರಸಾದ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಸಂದೀಪ್ ಕುಮಾರ್ ಛಾಯಾಚಿತ್ರಗ್ರಹಣವಿದೆ. ಮಂಜು ಮಾಂಡವ್ಯ ‘ಕಣ್ಮುಂದೆ ಬಂದು..’ ಹಾಡಿಗೆ ಸಾಹಿತ್ಯ ಬರೆದಿದ್ದು, ಅಶ್ವಿನಿ ಗೌಡ, ಶಿವರಾಜ್ ಕೆ.ಆರ್. ಪೇಟೆ, ರಾಮ್ ಪವನ್, ನಂದ, ವಂಶಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.