ಪ್ರಭಾಸ್–ಪ್ರಶಾಂತ್ ನೀಲ್ ಕಾಂಬಿನೇಷನ್ನ ಬಹುನಿರೀಕ್ಷಿತ ‘ಸಲಾರ್’ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಈ ಸಿನಿಮಾ ಕೂಡ ‘ಕೆ.ಜಿ.ಎಫ್.’ನಂತೆ ಎರಡು ಭಾಗಗಳಲ್ಲಿ ತೆರೆಕಾಣಲಿದೆ. ಸಿನಿಮಾದ ಮೊದಲ ಭಾಗಕ್ಕೆ ‘ಸೀಸ್ ಫೈರ್’ ಎಂಬ ಅಡಿಬರಹ ನೀಡಿದ್ದಾರೆ ನೀಲ್.

ಹೊಂಬಾಳೆ ಫಿಲ್ಮ್ಸ್ನಡಿ ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಭರ್ಜರಿ ಆ್ಯಕ್ಷನ್ ದೃಶ್ಯಗಳು ಮತ್ತು ಸಂಭಾಷಣೆಗಳಿಂದ ಕೂಡಿರುವ ಟೀಸರ್ ಬಿಡುಗಡೆಯಾದ ಕೆಲ ಗಂಟೆಗಳಲ್ಲೇ 25 ಮಿಲಿಯನ್ ವ್ಯೂಸ್ ಪಡೆದಿದೆ. ‘ಕೆ.ಜಿ.ಎಫ್.’ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್, ಈ ಬಾರಿ ‘ಸಲಾರ್’ ಮೂಲಕ ಇನ್ನೊಂದು ಹೊಸ ಪ್ರಪಂಚ ಸೃಷ್ಟಿಸಿದ್ದಾರೆ. ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿ ಬಳಿ 14 ಬೃಹತ್ ಸೆಟ್ಗಳನ್ನು ಈ ಚಿತ್ರಕ್ಕಾಗಿ ನಿರ್ಮಿಸಿ, ಅಲ್ಲಿ ಚಿತ್ರೀಕರಣ ಮಾಡಲಾಗಿದೆ.

₹400 ಕೋಟಿ ವೆಚ್ಚ: ಕನ್ನಡದ ನಿರ್ಮಾಣ ಸಂಸ್ಥೆ, ನಿರ್ದೇಶಕರು, ತಂತ್ರಜ್ಞರು ಮತ್ತು ಕಲಾವಿದರು, ತೆಲುಗಿನ ಸ್ಟಾರ್ ನಟ ಪ್ರಭಾಸ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ತಮಿಳಿನ ಶ್ರುತಿ ಹಾಸನ್ ಹೀಗೆ ಎಲ್ಲ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ‘ಸಲಾರ್’ ಚಿತ್ರತಂಡದಲ್ಲಿದ್ದಾರೆ. ಚಿತ್ರ ಸೆಪ್ಟೆಂಬರ್ 28ರಂದು ಬಿಡುಗಡೆಯಾಗಲಿದೆ. ಸುಮಾರು ₹400 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಚಿತ್ರವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ ಎಂದಿದೆ ಚಿತ್ರತಂಡ.

ವಿದೇಶಗಳಲ್ಲೂ ಚಿತ್ರದ ವಿಎಫ್ಎಕ್ಸ್ ಕೆಲಸ ನಡೆದಿದ್ದು, ಆ್ಯಕ್ಷನ್ ದೃಶ್ಯಗಳಲ್ಲಿ ಬೇರೆ ದೇಶಗಳಿಂದ ಬಂದ ಹಲವು ನುರಿತ ಸಾಹಸ ಕಲಾವಿದರು ಕೆಲಸ ಮಾಡಿರುವುದು ಚಿತ್ರದ ವಿಶೇಷತೆಗಳಲ್ಲೊಂದು. ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ಈ ಚಿತ್ರದಲ್ಲಿ ರವಿ ಬಸ್ರೂರು ಅವರ ಸಂಗೀತ, ಭುವನ್ ಗೌಡ ಛಾಯಾಚಿತ್ರಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.