ಬೆಂಗಳೂರು: ವಿಕ್ಕಿ ಕೌಶಲ್ ನಟಿಸಿರುವ ಹಾಗೂ ಮೇಘನಾ ಗುಲ್ಜಾರ್ ನಿರ್ದೇಶಿಸಿರುವ ಸ್ಯಾಮ್ ಬಹದ್ದೂರ್ ಸಿನಿಮಾ ಡಿಸೆಂಬರ್ 1 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು ಪ್ರೇಕ್ಷಕರಿಂದ ಉತ್ತಮ ಅಭಿಪ್ರಾಯ ವ್ಯಕ್ತವಾಗಿದೆ.

ಈ ಚಿತ್ರ ದಿವಂಗತ ಫಿಲ್ಡ್ ಮಾರ್ಷಲ್ ಸ್ಯಾಮ್ ಬಹದ್ದೂರ್ ಮಾಣಿಕ್ ಷಾ ಅವರ ಜೀವನಗಾಥೆಯನ್ನು ಆಧರಿಸಿದ ಚಿತ್ರವಾಗಿದೆ.

ಚಿತ್ರದಲ್ಲಿ ವಿಕ್ಕಿ ಕೌಶಲ್ ಅವರ ನಟನೆ ಅತ್ಯಂತ ಮನೋಜ್ಞವಾಗಿದ್ದು ಪಾತ್ರವನ್ನು ಜೀವಿಸಿದ್ದಾರೆ. ಮಾಣಿಕ್ ಷಾ ಅವರ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ಏತನ್ಮಧ್ಯೆ ಚಿತ್ರವನ್ನು ವೀಕ್ಷಿಸಿರುವ ಮಾಣಿಕ್ ಷಾ ಅವರ ಪುತ್ರಿ ಮಾಯಾ ಅವರು, ಈ ಸಿನಿಮಾ ನಮ್ಮ ತಂದೆಯ ಬಗ್ಗೆ ಹಾಗೂ ದೇಶದ ಬಗ್ಗೆ ಅತೀವ ಹೆಮ್ಮೆ ಮೂಡುವಂತೆ ಮಾಡುತ್ತದೆ ಎಂದು ಹೇಳಿದ್ದಾರೆ. ಚಿತ್ರವನ್ನು ನಾನು ಎರಡು ಬಾರಿ ನೋಡಿದೆ. ಎರಡೂ ಬಾರಿ ನನ್ನ ಕಣ್ಣಲ್ಲಿ ನೀರು ಬಂದಿದೆ ಎಂದು ಅವರು ಹೇಳಿರುವುದಾಗಿ ಇಂಡಿಯಾ ಟುಡೇ ವೆಬ್‌ಸೈಟ್ ವರದಿ ಮಾಡಿದೆ.

ಚಿತ್ರದಲ್ಲಿ ಸಾನ್ಯಾ ಮಲ್ಹೊತ್ರಾ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಅಪ್ರತಿಮ ಸಾಧನೆ ಮಾಡಿದ್ದ ಸ್ಯಾಮ್ ಮಾಣಿಕ್ ಷಾ ಅವರಿಗೆ ಫಿಲ್ಡ್ ಮಾರ್ಷಲ್ ಎಂಬ ಬಿರುದನ್ನು ಕೊಟ್ಟು ಗೌರವಿಸಲಾಗಿತ್ತು. ಅವರು 2008 ರಲ್ಲಿ ನಿಧನರಾದರು. ಅವರಿಗೆ ಇಬ್ಬರು ಪುತ್ರಿಯರು ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.