ಹೇಳಿಕೆ ಹಿಂದಕ್ಕೆ
ಟೀಕೆ ವ್ಯಕ್ತವಾದ ಬೆನ್ನಲ್ಲೇ ಸುರೇಖಾ ಅವರು, 'ನನ್ನ ಹೇಳಿಕೆಗಳು ನಿಮಗೆ ಅಥವಾ ನಿಮ್ಮ ಅಭಿಮಾನಿಗಳಿಗೆ ನೋವುಂಟು ಮಾಡಿದ್ದರೆ, ಹೇಳಿಕೆಗಳನ್ನು ಬೇಷರತ್ತಾಗಿ ಹಿಂಪಡೆದುಕೊಳ್ಳುತ್ತೇನೆ. ಅನ್ಯಥಾ ಭಾವಿಸಬೇಡಿ. ಮಹಿಳೆಯರನ್ನು ಕೀಳಾಗಿ ಕಾಣುವ ರಾಜಕೀಯ ನಾಯಕರನ್ನು ಪ್ರಶ್ನಿಸುವುದು ನನ್ನ ಹೇಳಿಕೆಯ ಉದ್ದೇಶವಾಗಿತ್ತು. ನಿಮ್ಮನ್ನು (ಸಮಂತಾ) ನೋಯಿಸುವುದಲ್ಲ’ ಎಂದು ಹೇಳಿದ್ದಾರೆ.