‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ ಚಂದನವನದಲ್ಲಿ ಗುರುತಿಸಿಕೊಂಡಿದ್ದ ನಟಿ ಸಂಯುಕ್ತ ಹೆಗಡೆ ‘ಕ್ರೀಂ’ ಎನ್ನುವ ಕನ್ನಡ ಸಿನಿಮಾ ಮೂಲಕ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಸಂಯುಕ್ತ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಚಿತ್ರದ ವಿಷ್ಯುವಲ್ ಟ್ರೈಲರ್ ಇತ್ತೀಚೆಗೆ ತೆರೆಕಂಡಿತು.

ವರ್ಷದ ಹಿಂದೆ ಕನ್ನಡದ ‘ರಾಣ’ ಸಿನಿಮಾದ ಹಾಡೊಂದರಲ್ಲಿ ಮೈಬಳುಕಿಸಿದ್ದ ಸಂಯುಕ್ತ ಇದೀಗ ಅಭಿಷೇಕ್ ಬಸಂತ್ ನಿರ್ದೇಶಿಸುತ್ತಿರುವ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಬರೆದಿದ್ದಾರೆ.

‘ಭಾರತದಲ್ಲಿ ಪ್ರತಿವರ್ಷ ಎರಡೂವರೆ ಸಾವಿರ ಮಹಿಳೆಯರು ಒಂದಲ್ಲಾ ಒಂದು ಕಾರಣದಿಂದ ಬಲಿಯಾಗುತ್ತಿದ್ದಾರೆ? ಅದಕ್ಕೆ ಕಾರಣ ಏನು ಎಂಬುದನ್ನು ತಿಳಿಸುವ ಕಥೆ ಈ ಚಿತ್ರದಲ್ಲಿದೆ. ನಿರ್ದೇಶಕ ಅಭಿಷೇಕ್ ಬಸಂತ್ ನನ್ನ ತಮ್ಮನ ಮಗ. ಅಚ್ಚುಕಟ್ಟಾಗಿ ಸಿನಿಮಾ ನಿರ್ದೇಶಿಸಿದ್ದಾನೆ’ ಎನ್ನುತ್ತಾರೆ ಅಗ್ನಿ ಶ್ರೀಧರ್.

ನಟಿ ಸಂಯುಕ್ತ ಮಾತನಾಡಿ, ‘ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಈ ಸಿನಿಮಾ ಮೂಲಕ ಕಾಣಿಸಿಕೊಂಡಿದ್ದೇನೆ. ಐದು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಸಿನಿಮಾ ಇದು. ಈ ಚಿತ್ರದಲ್ಲಿ ಆ್ಯಕ್ಷನ್ ಕೂಡ ಮಾಡಿದ್ದೇನೆ. ಚಿತ್ರೀಕರಣದ ಸಂದರ್ಭದಲ್ಲಿ ಕಾಲು ಮುರಿದುಕೊಂಡಿದ್ದೆ’ ಎಂದು ಚಿತ್ರೀಕರಣದ ಅನುಭವ ಹಂಚಿಕೊಂಡರು.

ಈಗಾಗಲೇ ಶೂಟಿಂಗ್ ಪೂರ್ಣಗೊಳಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸ ಆರಂಭಿಸಿದೆ. ‘ಸದ್ಯದಲ್ಲೇ ಸಿನಿಮಾ ಬಿಡುಗಡೆಯಾಗಲಿದೆ’ ಎಂದಿದ್ದಾರೆ ಅಭಿಷೇಕ್ ಬಸಂತ್. ರೋಹಿತ್ ಸಂಗೀತ ನಿರ್ದೇಶನ, ಶಿವಕುಮಾರ್ ಕಲಾ ನಿರ್ದೇಶನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.