ಬೆಂಗಳೂರು: ಕೋವಿಡ್ ಲಾಕ್‌ಡೌನ್‌ನಿಂದಾಗಿ ಧಾರಾವಾಹಿ ಮತ್ತು ಸಿನಿಮಾ ಚಿತ್ರೀಕರಣದಿಂದ ಬಿಡುವು ಪಡೆದುಕೊಂಡಿದ್ದ ನಟ ಚಂದನ್ ಕುಮಾರ್, ದೇಹದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಈ ಕುರಿತು ಚಂದನ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫೋಟೊವೊಂದನ್ನು ಹಂಚಿಕೊಂಡಿದ್ದಾರೆ. ಜೂನ್ 21ರ ಫೋಟೊದಲ್ಲಿ ಚಂದನ್‍ಗೆ ಹೊಟ್ಟೆ ಬಂದಿತ್ತು. ಆದರೆ, ಆಗಸ್ಟ್ 26ರ ಫೋಟೊದಲ್ಲಿ ಅವರು ಸಖತ್ ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ.

ದೇಹದಲ್ಲಿ ಸಾಕಷ್ಟು ಬದಲಾವಣೆ ಮಾಡಿಕೊಂಡಿರುವ ಚಂದನ್ ಫೋಟೊ ನೋಡಿರುವ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸದ್ಯ ಇದೀಗ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಕೋವಿಡ್ ಲಾಕ್‍ಡೌನ್‌ನಿಂದಾಗಿ ನಟ–ನಟಿಯರು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದ್ದರಿಂದ ಅನೇಕರು ಫಿಟ್ನೆಸ್ ಕಳೆದುಕೊಂಡಿದ್ದಾರೆ. ಇವರಲ್ಲಿ ಚಂದನ್ ಕುಮಾರ್ ಕೂಡ ಹೊರತಲ್ಲ. ಆದರೆ ಕೇವಲ ಎರಡೇ ತಿಂಗಳಲ್ಲಿ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ.

ಕಳೆದ ಮೇ ತಿಂಗಳಲ್ಲಿ ಚಂದನ್ ಅವರು ನಟಿ ಕವಿತಾ ಗೌಡ ಅವರೊಂದಿಗೆ ಮದುವೆಯಾಗಿದ್ದಾರೆ.

ಇದನ್ನೂ ಓದಿ... ಜನ್ಮದಿನ: ಇರುವಲ್ಲಿಂದಲೇ ಶುಭ ಹಾರೈಸುವಂತೆ ಅಭಿಮಾನಿಗಳಿಗೆ ಕಿಚ್ಚನ ಮನವಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.