ನಟ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ’ ಸಿನಿಮಾ ಪ್ರೀಕ್ವೆಲ್ನ ಶೂಟಿಂಗ್ ಕುಂದಾಪುರದಲ್ಲಿ ನಡೆಯುತ್ತಿದ್ದು, ಇದೀಗ ಆ್ಯಕ್ಷನ್ ಭಾಗಗಳ ಚಿತ್ರೀಕರಣಕ್ಕೆ ಚಿತ್ರತಂಡ ಧುಮುಕಿದೆ.

ಸಾಹಸ ನಿರ್ದೇಶನಕ್ಕಾಗಿ ತೆಲುಗಿನ ಹಿಟ್ ಸಿನಿಮಾ ‘ಆರ್ಆರ್ಆರ್’ನ ಆ್ಯಕ್ಷನ್ ನಿರ್ದೇಶಕರಾಗಿದ್ದ ಟೊಡರ್ ಲ್ಯಾಜರೋವ್ ಆಗಮಿಸಿದ್ದಾರೆ. ಇದಕ್ಕಾಗಿ ಬಲ್ಗೇರಿಯಾದಿಂದ ಟೊಡರ್ ಕುಂದಾಪುರಕ್ಕೆ ಆಗಮಿಸಿದ್ದಾರೆ. ಈಗಾಗಲೇ ದೈಹಿಕವಾಗಿ ಹಲವು ಮಾರ್ಪಾಡುಗಳನ್ನು ಮಾಡಿಕೊಂಡಿರುವ ರಿಷಬ್, ಕಳರಿಪಯಟ್ಟು ತರಬೇತಿಯನ್ನೂ ಪಡೆದಿದ್ದಾರೆ. ಸಿನಿಮಾ 2025ರ ಆಗಸ್ಟ್ನಲ್ಲಿ ತೆರೆಕಾಣುವ ಸಾಧ್ಯತೆ ಇದೆ.

2023ರ ನವೆಂಬರ್ನಲ್ಲಿ ಸೆಟ್ಟೇರಿದ್ದ ಈ ಚಿತ್ರವನ್ನು ಈಗಾಗಲೇ ಪ್ರೈಂ ವಿಡಿಯೊ ಖರೀದಿಸಿದೆ. ಕದಂಬರ ಆಳ್ವಿಕೆಯ ಕಾಲದಲ್ಲಿ ಹುಟ್ಟಿದ ದಂತಕಥೆಯ ಕಥಾಹಂದರ ಇದಾಗಿದ್ದು, ಕನ್ನಡ, ಇಂಗ್ಲಿಷ್ ಸೇರಿದಂತೆ ಏಳು ಭಾಷೆಗಳಲ್ಲಿ ಏಕಕಾಲದಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಎಸ್.ಕಶ್ಯಪ್ ಅವರ ಛಾಯಾಚಿತ್ರಗ್ರಹಣ ಸೇರಿದಂತೆ ಮೊದಲ ಭಾಗದಲ್ಲಿ ಕಾರ್ಯನಿರ್ವಹಿಸಿದ್ದ ತಾಂತ್ರಿಕ ತಂಡವೇ ಪ್ರೀಕ್ವೆಲ್ನಲ್ಲೂ ಕೆಲಸ ಮಾಡುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.