ಶಿವರಾಜ್‌ಕುಮಾರ್ ನಟನೆಯ ಈ ವರ್ಷದ ಬಹುನಿರೀಕ್ಷಿತ ಚಿತ್ರ ‘ಭೈರತಿ ರಣಗಲ್’ನ ಶೀರ್ಷಿಕೆ ಗೀತೆ ಬಿಡುಗಡೆಗೊಂಡಿದೆ. ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ ಚಿತ್ರವನ್ನು ನರ್ತನ್ ನಿರ್ದೇಶಿಸಿದ್ದಾರೆ.

ಕಿನ್ನಾಳ್ ರಾಜ್ ಅವರು ಬರೆದಿರುವ ‘ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು’ ಎಂಬ ಶೀರ್ಷಿಕೆ ಗೀತೆಗೆ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಲುಂಗಿ, ಕಪ್ಪು ಅಂಗಿಯಲ್ಲಿ ಕಾಣಿಸಿಕೊಂಡಿರುವ ಶಿವರಾಜ್‌ಕುಮಾರ್ ಗಣಿಭೂಮಿಯಲ್ಲಿ ಧೂಳೆಬ್ಬಿಸುವ ಪಾತ್ರವನ್ನು ನಿರ್ವಹಿಸಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ.

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್‌ನಲ್ಲಿ ಬಂದಿದ್ದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಸೆಪ್ಟೆಂಬರ್‌ನಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಹೇಳಿದೆ.

ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಚಿತ್ರಗ್ರಹಣ, ಆಕಾಶ್ ಹಿರೇಮಠ ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.