ವಸಿಷ್ಠ ಸಿಂಹ ಹಾಗೂ ಸ್ಟೆಫಿ ಪಟೇಲ್ ನಟನೆಯ ಚಿತ್ರ ‘ಲವ್ ಲಿ’ ಡಬ್ಬಿಂಗ್ ಹಂತದಲ್ಲಿದೆ. ಡಬ್ಬಿಂಗ್ ಪೂರ್ಣಗೊಳಿಸಿದ ಬೆನ್ನಲ್ಲೇ ಲಂಡನ್‌ನಲ್ಲಿ ಹಾಡೊಂದರ ಚಿತ್ರೀಕರಣಕ್ಕಾಗಿ ತೆರಳಲು ಚಿತ್ರತಂಡ ಸಜ್ಜಾಗಿದೆ.

ಚೇತನ್ ಕೇಶವ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಸಿನಿಮಾದ ಮೂರನೇ ಹಂತದ ಚಿತ್ರೀಕರಣ ತಿಂಗಳ ಹಿಂದೆ ಕರಾವಳಿ ತೀರದಲ್ಲಿ ನಡೆದಿತ್ತು. ಮಲ್ಪೆಯ ಪಡುಕರೆಯಲ್ಲಿ ಚಿತ್ರೀಕರಣಕ್ಕಾಗಿ ಚಿತ್ರತಂಡ ಕಡಲ ತೀರದಲ್ಲಿ ₹1 ಕೋಟಿ ವೆಚ್ಚದಲ್ಲಿ ಮನೆಯ ಸೆಟ್ ಒಂದನ್ನು ನಿರ್ಮಾಣ ಮಾಡಿತ್ತು. ಕಮರ್ಷಿಯಲ್ ರೋಮ್ಯಾಂಟಿಕ್ ಕಥಾಹಂದರವನ್ನು ಹೊಂದಿರುವ ಈ ಚಿತ್ರದಲ್ಲಿ ರೌಡಿಸಂ ಅಂಶಗಳೂ ಅಡಕವಾಗಿವೆ.

‘ಲವ್ ಲಿ’ ತಂಡ ಕಳೆದ ಏಳು ದಿನಗಳಿಂದ ಡಬ್ಬಿಂಗ್‌ನಲ್ಲಿ ತೊಡಗಿಸಿಕೊಂಡಿದೆ. ವಸಿಷ್ಠ ಸಿಂಹ, ಸ್ಟೆಫಿ ಪಟೇಲ್, ದತ್ತಣ್ಣ, ರಂಗಾಯಣ ರಘು, ಅಚ್ಯುತ್ ಕುಮಾರ್ ಚಿತ್ರದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಇನ್ನೂ ಐದು ದಿನಗಳ ಡಬ್ಬಿಂಗ್ ಕೆಲಸ ಬಾಕಿ ಇದೆ ಎಂದಿದ್ದಾರೆ ಚೇತನ್. ಈ ಸಿನಿಮಾ ಕೇಶವ್ ಅವರ ನಿರ್ದೇಶನದ ಚೊಚ್ಚಲ ಸಿನಿಮಾ. ಈ ಚಿತ್ರದಲ್ಲಿ ವಸಿಷ್ಠ ಸಿಂಹ ವಿಭಿನ್ನ ಶೇಡ್ಸ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಡಬ್ಬಿಂಗ್ ಕೆಲಸ ಮುಗಿಯುತ್ತಿದ್ದಂತೆ ಹಾಡಿನ ಚಿತ್ರೀಕರಣಕ್ಕೆ ತಂಡ ಲಂಡನ್‌ನತ್ತ ತೆರಳಲಿದೆ.

‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿ ಖ್ಯಾತಿಯ ಸಮೀಕ್ಷಾ, ಸಾಧುಕೋಕಿಲ ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ. ಎಂ.ಆರ್ ರವೀಂದ್ರ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾಗೆ ಅಶ್ವಿನ್ ಕೆನಡಿ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.