ಕೆಲ ವರ್ಷ ಚಂದನವನದಿಂದ ದೂರವೇ ಉಳಿದಿದ್ದ ನಟಿ ಶ್ರುತಿ ಹರಿಹರನ್ ಇದೀಗ ಮತ್ತೆ ಚಂದನವನದಲ್ಲಿ ಸಕ್ರಿಯರಾಗಿದ್ದಾರೆ. ನಟ ‘ಡಾಲಿ’ ಧನಂಜಯ್ ನಟನೆಯ ‘ಹೆಡ್ಬುಷ್’ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಬಣ್ಣಹಚ್ಚಿರುವ ಶ್ರುತಿ ಅವರು, ಇದೀಗ ‘ಸ್ಟ್ರಾಬೆರಿ’ ಎಂಬ ಸಿನಿಮಾದಲ್ಲಿ ಲೈಂಗಿಕ ಕಾರ್ಯಕರ್ತೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪರಂವಃ ಸ್ಪಾಟ್ಲೈಟ್ ನಿರ್ಮಾಣದ ಮೊದಲ ಚಿತ್ರ ಇದಾಗಿದೆ. ತಾಯಿ ಪ್ರೀತಿಯನ್ನು ಕಳೆದುಕೊಂಡ ಅಮೃತಾ ಎನ್ನುವ ಲೈಂಗಿಕ ಕಾರ್ಯಕರ್ತೆಯೊಬ್ಬಳು ಮತ್ತೊಮ್ಮೆ ಅಂಥ ಪ್ರೀತಿಯ ಭರವಸೆ ಸಿಕ್ಕಾಗ ಕಡಲನ್ನು ಸೇರಲು ಹೊರಟ ನದಿಯಂತೆ ಹೊರಡುವ ಕಥೆಯೇ ‘ಸ್ಟ್ರಾಬೆರಿ’ ಎಂದಿದೆ ಚಿತ್ರತಂಡ. ಶ್ರುತಿ ಹರಿಹರನ್ ಅವರು ‘ಅಮೃತಾ’ ಎನ್ನುವ ಲೈಂಗಿಕ ಕಾರ್ಯಕರ್ತೆಯ ಪಾತ್ರವನ್ನು ನಿಭಾಯಿಸಿದರೆ, ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ ಮತ್ತು ‘ಒಂದು ಮೊಟ್ಟೆಯ ಕಥೆ’, ‘ಬೀರ್ಬಲ್’ ಮತ್ತು ‘ಗರುಡ ಗಮನ ವೃಷಭ ವಾಹನ’ ಚಿತ್ರಗಳಲ್ಲಿ ನಟಿಸಿರುವ ವಿನೀತ್ ಕುಮಾರ್ ಮತ್ತೆರಡು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಮಂಗಳೂರಿನ ರಂಗಭೂಮಿಯಲ್ಲಿ ಪಳಗಿರುವ ವಿಜಯ್ ಮಯ್ಯ ಮತ್ತೊಂದು ವಿಶೇಷವಾದ ‘ಜಾರ್ಜ್’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ರಿವರ್ಸ್ ಸ್ಕ್ರೀನ್ ಪ್ಲೇನಲ್ಲಿ ಸಾಗುವ ಈ ಚಿತ್ರವನ್ನು ಅರ್ಜುನ್ ಲೂವಿಸ್ ಅವರು ಬರೆದು ನಿರ್ದೇಶಿಸಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಚಿತ್ರ. ನಟ ರಕ್ಷಿತ್ ಶೆಟ್ಟಿ ನಿರ್ಮಾಣದಲ್ಲಿ ಪರಂವಃ ಸ್ಪಾಟ್ಲೈಟ್ ಬ್ಯಾನರ್ನಡಿ ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೊನೆಯ ಹಂತದಲ್ಲಿದ್ದು, ಜೋಯೆಲ್ ಶಮನ್ ಡಿಸೋಜಾ ಛಾಯಾಗ್ರಹಣ, ಪ್ರಸಾದ್ ಕೆ. ಶೆಟ್ಟಿ ಸಂಗೀತ, ರಾಹುಲ್ ವಸಿಷ್ಠ ಸಂಕಲನ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.