ವಿಜಯ ರಾಘವೇಂದ್ರ ಮುಖ್ಯಭೂಮಿಕೆಯಲ್ಲಿರುವ ‘ಜೋಗ್ 101’ ಚಿತ್ರದ ಫಸ್ಟ್ ಲುಕ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರಕ್ಕೆ ವಿಜಯ್ ಕನ್ನಡಿಗ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು ಈ ಚಿತ್ರವನ್ನು ನಿರ್ಮಿಸಿದ್ದಾರೆ.

‘ಸಿನಿಮಾ ಚಿತ್ರೀಕರಣ ಪೂರ್ಣಗೊಂಡಿದ್ದು, ಮುಂದಿನ ಕೆಲಸಗಳು ನಡೆಯುತ್ತಿವೆ. ಆದಷ್ಟು ಬೇಗ ಚಿತ್ರ ತೆರೆಗೆ ಬರಲಿದೆ’ ಎಂದು ಚಿತ್ರತಂಡ ಹೇಳಿದೆ.

ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇಗೌಡ, ಕಡ್ಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ ಮೊದಲಾದವರ ತಾರಾಗಣವಿದೆ.

ಅವಿನಾಶ್ ಆರ್. ಬಾಸೂತ್ಕರ್ ಸಂಗೀತ ನಿರ್ದೇಶನ, ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.